ಐತಿಹಾಸಿಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ‘ಕಾಂತಾರ’ ಸ್ಟಾರ್ ರಿಷಬ್

Updated on: May 23, 2024 | 8:28 AM

ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳ ಜೊತೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ದೇವಸ್ಥಾನ ತುಂಗಾ ನದಿ ತಟದಲ್ಲಿದ್ದು, ಹಲವು ವರ್ಷಗಳ ಇತಿಹಾಸ ಇದೆ.

ನಟ ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ಅವರಿಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಅವರು ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಈಗ ರಿಷಬ್ ಶೆಟ್ಟಿ (Rishab Shetty) ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳ ಜೊತೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ದೇವಸ್ಥಾನ ತುಂಗಾ ನದಿ ತಟದಲ್ಲಿದ್ದು, ಹಲವು ವರ್ಷಗಳ ಇತಿಹಾಸ ಇದೆ. ಮಠದ ಆವರಣದಲ್ಲಿ ಅಭಿಮಾನಿಗಳ ಜೊತೆ ಫೋಟೋಗೆ ರಿಷಬ್ ಪೋಸ್​ ಕೊಟ್ಟಿದ್ದಾರೆ. ‘ಕಾಂತಾರ’ ಸಿನಿಮಾ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಒಳ್ಳೆಯ ಕಮಾಯಿ ಮಾಡಿತ್ತು. ಈ ಕಾರಣಕ್ಕೆ ಎರಡನೇ ಪಾರ್ಟ್​ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More