‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ

Edited By:

Updated on: Feb 22, 2026 | 3:50 PM

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆ.22) ಕರ್ನಾಟಕದಲ್ಲಿ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ‘ಜೈ ಹನುಮಾನ್’ ಚಿತ್ರತಂಡ ಆಗಮಿಸಿದೆ.

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ (Jai Hanuman) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆಬ್ರವರಿ 22) ಕರ್ನಾಟಕದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಇಡೀ ಚಿತ್ರತಂಡ ಆಗಮಿಸಿದೆ. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ ಕೂಡ ಆಗಮಿಸಿದ್ದಾರೆ. ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. ಈ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ರಿಷಬ್ ಶೆಟ್ಟಿ (Rishab Shetty) ಅವರನ್ನು ನೋಡಲು ಅಂಜನಾದ್ರಿ ಬೆಟ್ಟದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರನ್ನು ನೋಡಿ ಜೈಕಾರ ಕೂಗಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 22, 2026 01:03 PM
Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More