‘ಬರ್ತ್​ಡೇ ಸೆಲೆಬ್ರೇಷನ್​​ಗೆ ಯಾವುದೇ ಆಡಂಬರ ಬೇಡ ಎಂದಿದ್ದಾನೆ’; ರಿಷಬ್ ಕೋರಿಕೆ ಬಗ್ಗೆ ಪ್ರಮೋದ್ ಶೆಟ್ಟಿ ಮಾತು

Updated on: Jul 07, 2023 | 11:58 AM

ನಂದಿ ಲಿಂಕ್ ಗ್ರೌಂಡ್​ನಲ್ಲಿ ರಿಷಬ್ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಇದಕ್ಕೆ ಸಕಲ ಸಿದ್ಧತೆ ನಡೆದಿದೆ. ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಕೂಡ ಇದೆ.

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಚಿತ್ರದ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಈಗ ಅವರು ‘ಕಾಂತಾರ 2’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜುಲೈ 7) ಅವರ ಜನ್ಮದಿನ. ನಂದಿ ಲಿಂಕ್ ಗ್ರೌಂಡ್​ನಲ್ಲಿ ರಿಷಬ್ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಇದಕ್ಕೆ ಸಕಲ ಸಿದ್ಧತೆ ನಡೆದಿದೆ. ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಕೂಡ ಇದೆ. ‘ಈಗಾಗಲೇ ರಿಷಬ್ 10 ಬಾರಿ ಕರೆ ಮಾಡಿದ್ದಾನೆ. ಆಡಂಬರ ಬೇಡ, ಸಣ್ಣ ವೇದಿಕೆ ಕೊಡಿ ಸಾಕು ನನಗೆ ಎನ್ನುತ್ತಿದ್ದಾನೆ. ಆದರೆ, ಫ್ಯಾನ್ಸ್ ಜೋರಾಗಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ’ ಎಂದು ಪ್ರಮೋದ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More