‘ಕಾಂತಾರ’ ಗೆಲುವಿನ ಬಳಿಕ ಅದ್ದೂರಿಯಾಗಿ ದೀಪಾವಳಿ ಆಚರಿಸಿದ ರಿಷಬ್ ಶೆಟ್ಟಿ ಫ್ಯಾಮಿಲಿ
ರಿಷಬ್ ಶೆಟ್ಟಿ ಮನೆಯಲ್ಲಿ ಎಲ್ಲ ಹಬ್ಬಗಳನ್ನು ಸಡಗರದಿಂದ ಆಚರಣೆ ಮಾಡುತ್ತಾರೆ. ಈ ಬಾರಿ ಅವರ ಕುಟುಂಬದಲ್ಲಿ ದೀಪಾವಳಿ ಹಬ್ಬ ವಿಶೇಷವಾಗಿತ್ತು. ಯಾಕೆಂದರೆ, ‘ಕಾಂತಾರ: ಚಾಪ್ಟರ್ 1’ ಚಿತ್ರ ವಿಶ್ವಾದ್ಯಂತ ಅಬ್ಬರಿಸಿದೆ. ಜನರು ಈ ಸಿನಿಮಾಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಖುಷಿಯ ನಡುವೆ ರಿಷಬ್ ಶೆಟ್ಟಿ ಕುಟುಂಬದವರು ದೀಪಾವಳಿ ಆಚರಿಸಿದ್ದಾರೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ಮನೆಯಲ್ಲಿ ಎಲ್ಲ ಹಬ್ಬಗಳನ್ನು ಸಡಗರದಿಂದ ಆಚರಣೆ ಮಾಡುತ್ತಾರೆ. ಈ ಬಾರಿ ಅವರ ಮನೆಯಲ್ಲಿ ದೀಪಾವಳಿ (Deepavali) ಹಬ್ಬ ಬಹಳ ವಿಶೇಷವಾಗಿತ್ತು. ಯಾಕೆಂದರೆ, ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ವಿಶ್ವಾದ್ಯಂತ ಅಬ್ಬರಿಸಿದೆ. ಜನರು ಈ ಸಿನಿಮಾಗೆ ಭಾರಿ ಮೆಚ್ಚುಗೆ ಸೂಚಿಸಿದ್ದಾರೆ. ನಟನೆ, ನಿರ್ದೇಶನ ಮಾಡಿದ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ಈ ಎಲ್ಲ ಖುಷಿಯ ನಡುವೆ ಅವರು ಕುಟುಂಬದ ಜೊತೆ ಸೇರಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಈ ಬಾರಿ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಹೇಗಿತ್ತು ಎಂಬುದನ್ನು ತಿಳಿಸಲು ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಅವರಿಗೆ ಕೂಡ ಈ ದೀಪಾವಳಿ ವಿಶೇಷವಾಗಿದೆ. ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಕಾಸ್ಟ್ಯೂಮ್ ಡಿಸೈನ್ ಮಾಡಿ ಗೆದ್ದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.