ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ನಿಧನದಿಂದ ಚಿತ್ರರಂಗ ಆಘಾತಕ್ಕೊಳಗಾಗಿದೆ. ಖ್ಯಾತ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವರು ಪುನೀತ್ ಅಂತಿಮ ದರ್ಶನವನ್ನು ಪಡೆದು ನಮನ ಸಲ್ಲಿಸಿದ್ದಾರೆ. ತೆಲುಗು ಚಿತ್ರರಂಗದ ಹಲವು ಹಿರಿಯ ನಟರು ಕೂಡ ಪುನೀತ್ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಅದೇ ರೀತಿ ರಿಷಬ್ ಶೆಟ್ಟಿ ಕೂಡ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ.
ಇತ್ತೀಚೆಗೆ ‘ಭಜರಂಗಿ 2’ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಳ್ಳಲಾಗಿತ್ತು. ಅದಕ್ಕೆ ರಿಷಬ್ ಶೆಟ್ಟಿ ಕೂಡ ಆಗಮಿಸಿದ್ದರು. ಈ ವೇಳೆ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದರು. ಆದರೆ, ಈಗ ಅವರು ಹೀಗೆ ಮಲಗಿದ್ದಾರೆ. ಇದನ್ನು ಅವರ ಬಳಿ ನಂಬೋಕೆ ಆಗುತ್ತಿಲ್ಲ. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ.
ಇದನ್ನೂ ಓದಿ: ಭಾನುವಾರ ಪುನೀತ್ ಅಂತ್ಯಕ್ರಿಯೆ ಎಷ್ಟು ಗಂಟೆಗೆ? ಇಲ್ಲಿದೆ ಸಂಪೂರ್ಣ ಮಾಹಿತಿ