‘ಆ ದಿನಗಳು’ ಚೇತನ್ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ
ನಟ ಚೇತನ್ ಅವರು ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾದಲ್ಲಿರುವ ಕೆಲ ವಿಚಾರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇದಕ್ಕೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
ನಟ ಚೇತನ್ (Chetan) ಅವರು ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾದಲ್ಲಿರುವ ಕೆಲ ವಿಚಾರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು (Kantara Movie) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ’ ಎಂದು ಚೇತನ್ ಹೇಳಿದ್ದರು. ಇದಕ್ಕೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.