‘ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ’; ರಿಷಬ್ ಶೆಟ್ಟಿಗೆ ದೈವದ ಎಚ್ಚರಿಕೆ
ನಟ ರಿಷಬ್ ಶೆಟ್ಟಿ ಅವರು ದೈವ ಭಕ್ತರು. ಆಗಾಗ ಅವರು ದೇವಸ್ಥಾನಗಳಿಗೆ ಭೇಟಿ ಕೊಡುತ್ತಾ ಇರುತ್ತಾರೆ. ಈಗ ರಿಷಬ್ ಅವರು ದೇವರಲ್ಲಿ ಒಂದು ವಿಚಾರ ಕೇಳಿದ್ದಾರೆ. ಇದಕ್ಕೆ ದೈವದ ಕಡೆಯಿಂದ ಉತ್ತರವೂ ಸಿಕ್ಕಿದೆ. ದೈವ ಹೇಳಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ರಿಷಬ್ ಶೆಟ್ಟಿ (Rishab Shetty) ಅವರು ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ಭಾಗಿ ಆಗಿದ್ದಾರೆ. ವಾರಾಹಿ ಪಂಜುರ್ಲಿ ದೈವದ ಬಳಿ ನಟ ಕಷ್ಟ ಹೇಳಿಕೊಂಡಿದ್ದಾರೆ. ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ‘ನಿನಗೆ ದುಶ್ಮನ್ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ. ಯಾರು ನಿನಗೆ ಕೇಡು ಬಗೆದಿದ್ದಾರೆಂದು ಈಗ ಹೇಳಲ್ಲ, ನೋಡಿಕೊಳ್ತೇನೆ. ಹರಕೆ ಮಾಡಿಕಫ.. ಐದು ತಿಂಗಳ ಗಡುವಲ್ಲಿ ಒಳ್ಳೇದು ಮಾಡುತ್ತೇನೆ’ ಎಂದು ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವ ಅಭಯ ನೀಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 07, 2025 12:02 PM