AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ’; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್ ಶೆಟ್ಟಿ

‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ’; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್ ಶೆಟ್ಟಿ

ರಾಜೇಶ್ ದುಗ್ಗುಮನೆ
|

Updated on: Jun 29, 2026 | 8:28 AM

Share

ರಿಷಬ್ ಶೆಟ್ಟಿ ಅವರು ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ರಿಷಬ್ ಶೆಟ್ಟಿ ಅವರ ಮಕ್ಕಳು ಕೂಡ ಸಾಂಪ್ರದಾಯಿಕ ಶೈಲಿಯಲ್ಲಿ ಮಿಂಚಿದ್ದಾರೆ. ಅವರ ಮಗ ಚಂಡೆ ಬಡಿಯುವ ಜಾಗದಲ್ಲಿ ಜಾಗಟೆ ಬಾರಿಸುತ್ತಾ ಎಂಜಾಯ್ ಮಾಡಿದ್ದಾನೆ. ಬಳಿಕ ಯಕ್ಷಗಾನದ ಬಾಲ ಕಲಾವಿದನ ನೃತ್ಯವೂ ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಿಷಬ್ ಶೆಟ್ಟಿ ಅವರ ಸಂಸ್ಕೃತಿ ಪ್ರೇಮಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

‘ಕಾಂತಾರ’ ಚಿತ್ರದ ಮೂಲಕ ಕರಾವಳಿಯ ದೈವಾರಾಧನೆ ಮತ್ತು ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ನಡೆದ ಧಾರ್ಮಿಕ ಆಚರಣೆಗಳ ಸುಂದರ ಕ್ಷಣಗಳನ್ನು ಅವರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ ನಮ್ಮ ಮನೆಯಲ್ಲಿ ನಡೆದಾಗ ಮನ ತುಂಬಿದ ಕ್ಷಣಗಳು’ ಎಂದು ರಿಷಬ್ ಶೆಟ್ಟಿ ಭಾವುಕರಾಗಿ ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರ ಇಡೀ ಕುಟುಂಬ ಸಾಂಪ್ರದಾಯಿಕ ಉಡುಪಿನಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಜೊತೆಯಾಗಿ ಪೂಜೆ ಸಲ್ಲಿಸಿದ್ದಾರೆ.

ವಿಡಿಯೋದ ಮತ್ತೊಂದು ವಿಶೇಷವೆಂದರೆ ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನ. ರಿಷಬ್ ಶೆಟ್ಟಿ ಅವರ ಮನೆಯ ಆವರಣದಲ್ಲಿ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಕಲಾವಿದರು ಬಣ್ಣ ಹಚ್ಚಿಕೊಳ್ಳುವ ದೃಶ್ಯದಿಂದ ಹಿಡಿದು, ಅದ್ಭುತ ರಂಗಪ್ರದರ್ಶನದವರೆಗಿನ ದೃಶ್ಯಗಳು ವಿಡಿಯೋದಲ್ಲಿವೆ. ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬಸ್ಥರು ಮುಂಭಾಗದಲ್ಲಿ ಕುಳಿತು ಈ ಕಲಾ ವೈಭವವನ್ನು ಕಣ್ಣುಂಬಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More