Rishab Shetty Press Meet: ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ ಲೈವ್ ನೋಡಿ..

Updated on: Sep 22, 2025 | 6:25 PM

Kantara Chapter 1 Trailer: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಸಿನಿಮಾ ಮೇಲಿನ ಹೈಪ್ ಹೆಚ್ಚಿಸುವಂತೆ ಟ್ರೇಲರ್ ಬಿಡುಗಡೆ ಆಗಿದೆ. ಟ್ರೇಲರ್ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಇಂದು (ಸೆ.22) ಬೆಂಗಳೂರಿನಲ್ಲಿ ಚಿತ್ರತಂಡದವರು ಸುದ್ದಿಗೋಷ್ಠಿ ಮಾಡಿದ್ದಾರೆ. ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ ನೋಡಿ..

ಭಾರಿ ನಿರೀಕ್ಷೆ ಮೂಡಿಸಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಿಡುಗಡೆಗೆ ದಿನಗಣನೆ ಶುರು ಆಗಿದೆ. ಚಿತ್ರದ ಮೇಲಿನ ಹೈಪ್ ಹೆಚ್ಚಿಸುವಂತೆ ಟ್ರೇಲರ್ ರಿಲೀಸ್ ಮಾಡಲಾಗಿದೆ. ಟ್ರೇಲರ್ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಇಂದು (ಸೆಪ್ಟೆಂಬರ್ 22) ಬೆಂಗಳೂರಿನಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡದವರು ಸುದ್ದಿಗೋಷ್ಠಿ ಮಾಡಿದ್ದಾರೆ. ರಿಷಬ್​ ಶೆಟ್ಟಿ (Rishab Shetty), ರುಕ್ಮಿಣಿ ವಸಂತ್ ಹಾಗೂ ಅವರ ಇಡೀ ಟೀಮ್ ಭಾಗಿಯಾಗಿದೆ. ಅಕ್ಟೋಬರ್ 2ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅನೇಕ ವಿಷಯಗಳನ್ನು ಹಂಚಿಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 22, 2025 06:11 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More