ರಿಷಬ್ ಶೆಟ್ಟಿ ಟೆಂಪಲ್ ರನ್; ಹಲವು ದೇವಾಲಯಗಳಿಗೆ ‘ಕಾಂತಾರ’ ನಟನ ಭೇಟಿ

Updated on: May 24, 2024 | 8:22 AM

ರಿಷಬ್ ಅವರು ಕಳಸ ತಾಲೂಕಿನ ಹೊರನಾಡಿಗೆ ತೆರಳಿದ್ದಾರೆ. ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಅವರು ಪತ್ನಿಯ ಜೊತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ 2’ ಚಿತ್ರದ ಶೂಟಿಂಗ್​ನ ರಿಷಬ್ ಶೆಟ್ಟಿ ಆರಂಭಿಸಿದ್ದಾರೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ಪತ್ನಿ ಪ್ರಗತಿ ಜೊತೆ ದೇವಸ್ಥಾನ ಸುತ್ತುತ್ತಿದ್ದಾರೆ. ಅವರು ಇತ್ತೀಚೆಗೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈಗ ರಿಷಬ್ ಅವರು ಕಳಸ ತಾಲೂಕಿನ ಹೊರನಾಡಿಗೆ ತೆರಳಿದ್ದಾರೆ. ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಅವರು ಪತ್ನಿಯ ಜೊತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ 2’ ಚಿತ್ರದ ಶೂಟಿಂಗ್​ನ ರಿಷಬ್ ಶೆಟ್ಟಿ ಆರಂಭಿಸಿದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾಗೆಲುವಿಗಾಗಿ ರಿಷಬ್ ಶೆಟ್ಟಿ ಟೆಂಪಲ್ ರೌಂಡ್ಸ್ ಹಾಕುತ್ತಿದ್ದಾರೆ ಎನ್ನಲಾಗಿದೆ. ಕುಟುಂಬ ಸಮೇತ ಅವರು ಇಡೀ ದಿನ ದೇವಾಲಯಗಳ ದರ್ಶನ ಮಾಡಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More