‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ರಿಷಬ್ ಶೆಟ್ಟಿ ಪತ್ನಿ ಪ್ರಗತಿ

Updated on: Sep 22, 2025 | 10:37 PM

ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಅವರು ವಸ್ತ್ರ ವಿನ್ಯಾಸ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಎಲ್ಲರಿಗೂ ಕ್ಷಮೆ ಕೇಳಿದರು. ಅದಕ್ಕೆ ಕಾರಣ ಕೂಡ ಇದೆ.

ರಿಷಬ್ ಶೆಟ್ಟಿ ಅವರು ಮುಖ್ಯ ಪಾತ್ರದಲ್ಲಿ ನಟಿಸಿ, ನಿರ್ದೇಶನವನ್ನೂ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೇನು ಬಿಡುಗಡೆ ಆಗಲಿದೆ. ರಿಷಬ್ ಶೆಟ್ಟಿ (Rishab Shetty)ಪತ್ನಿ ಪ್ರಗತಿ ಶೆಟ್ಟಿ ಅವರು ಈ ಸಿನಿಮಾಗೆ ವಸ್ತ್ರ ವಿನ್ಯಾಸ ಮಾಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ (Kantara Chapter 1) ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಪ್ರಗತಿ ಶೆಟ್ಟಿ ಅವರು ಎಲ್ಲರಿಗೂ ಕ್ಷಮೆ ಕೇಳಿದರು. ಅದಕ್ಕೆ ಕಾರಣ ಕೂಡ ಇದೆ. ‘ಮೂರು ವರ್ಷದ ಬಳಿಕ ಕಾಂತಾರದ ಕಾಡಿನ ಪ್ರಪಂಚದಿಂದ ಊರಿಗೆ ಕಾಲಿಡುತ್ತಿದ್ದೇವೆ. ಎಲ್ಲರನ್ನೂ ನೋಡಿ ಖುಷಿ ಆಗುತ್ತಿದೆ. ಮಾಧ್ಯಮದವರೆಲ್ಲರಿಗೂ ನಾನು ಕ್ಷಮೆ ಕೇಳುತ್ತೇನೆ. ಯಾಕೆಂದರೆ, ನಾವು 3 ವರ್ಷ ಮನೆ-ಮಠ, ಮಕ್ಕಳನ್ನು ಕರೆದುಕೊಂಡು ಹೋಗಿ ಕುಂದಾಪುರದಲ್ಲಿ ಇದ್ದೆವು. ಮಕ್ಕಳನ್ನು ಅಲ್ಲೇ ಶಾಲೆಗೆ ಸೇರಿಸಿದ್ದೇವೆ. ನಮ್ಮನ್ನು ನೀವು ಸಂಪರ್ಕಿಸಿದಾಗ ಸಿಗಲು ಸಾಧ್ಯವಾಗಿಲ್ಲ. ಯಾರೂ ಬೇಜಾರು ಮಾಡಿಕೊಳ್ಳಬೇಡಿ’ ಎಂದು ಪ್ರಗತಿ ಶೆಟ್ಟಿ (Pragathi Shetty) ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More