Kantara Chapter 1: ‘ಕಾಂತಾರ ಚಾಪ್ಟರ್​ 1’ ಚಿತ್ರದಲ್ಲಿ ರಿಷಬ್​ ಪತ್ನಿಗೆ ಪಾತ್ರ ಇದೆಯಾ? ಮುಹೂರ್ತದ ದಿನ ಪ್ರಗತಿ ಶೆಟ್ಟಿ ಹೇಳಿದ್ದಿಷ್ಟು..

Updated on: Nov 27, 2023 | 6:02 PM

ರಿಷಬ್​ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ‘ಕಾಂತಾರ’ ಸಿನಿಮಾದಲ್ಲಿ ಪ್ರಗತಿ ಶೆಟ್ಟಿ ಅವರು ಒಂದು ಚಿಕ್ಕ ಪಾತ್ರ ಮಾಡಿದ್ದರು. ಇಂದು (ನವೆಂಬರ್​ 27) ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ’ ಪ್ರೀಕ್ವೆಲ್​ಗೆ ಮುಹೂರ್ತ ಮಾಡಲಾಗಿದೆ. ಈ ಸಂದರ್ಭದಲ್ಲಿ ಪ್ರಗತಿ ಶೆಟ್ಟಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಸಿನಿಪ್ರಿಯರು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ‘ಕಾಂತಾರ: ಚಾಪ್ಟರ್​ 1’ (Kantara: Chapter 1) ಸಿನಿಮಾದ ಮುಹೂರ್ತ ಇಂದು ನೆರವೇರಿದೆ. ನಟ, ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರ ಸಾರಥ್ಯದಲ್ಲಿ ಈ ಸಿನಿಮಾ ಮೂಡಿಬರಲಿದೆ. ‘ಕಾಂತಾರ’ ಸಿನಿಮಾದಲ್ಲಿ ಪ್ರಗತಿ ಶೆಟ್ಟಿ ಅವರು ಒಂದು ಚಿಕ್ಕ ಪಾತ್ರ ಮಾಡಿದ್ದರು. ಇಂದು (ನವೆಂಬರ್​ 27) ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ’ ಪ್ರೀಕ್ವೆಲ್​ಗೆ ಮುಹೂರ್ತ ಮಾಡಲಾಗಿದೆ. ಈ ಸಂದರ್ಭದಲ್ಲಿ ಪ್ರಗತಿ ಶೆಟ್ಟಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಕಳೆದ ಬಾರಿಯಂತೆ ನಾನು ಈ ಬಾರಿ ಕೂಡ ಕಾಸ್ಟ್ಯೂಮ್​ ಡಿಸೈನರ್​ ಆಗಿ ಕೆಲಸ ಮಾಡುತ್ತೇನೆ. ರಿಷಬ್​ ಶೆಟ್ಟಿ ಅವರ ಜೊತೆ ನಾನು ಯಾವಾಗಲೂ ಇರುತ್ತೇನೆ. ನನಗೆ ಈ ಚಿತ್ರದಲ್ಲಿ ಪಾತ್ರ ಇದೆಯೋ ಇಲ್ಲವೋ ಎಂಬುದು ಇನ್ನೂ ಗೊತ್ತಿಲ್ಲ. ಮುಂದೆ ರಿಷಬ್​ ಅವರು ಏನಾದರೂ ಹೇಳಿದರೆ ಇರಬಹುದು. ಸದ್ಯಕ್ಕೆ ನನ್ನ ಕಡೆಯಿಂದ ಕಾಸ್ಟ್ಯೂಮ್​ ಕೆಲಸಗಳು ಮಾತ್ರ ನಡೆಯುತ್ತಿವೆ’ ಎಂದು ಪ್ರಗತಿ ಶೆಟ್ಟಿ (Pragathi Shetty) ಹೇಳಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆ ಮೂಲಕ ವಿಜಯ್​ ಕಿರಗಂದೂರು ಅವರು ಬಂಡವಾಳ ಹೂಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More