ತುಂಬಿ ಹರಿಯುತ್ತಿರುವ ನೇತ್ರಾವತಿ ನದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್, ಶಾಲೆಗಳಿಗೆ ರಜೆ
ಇವತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಸುರಿಯುತ್ತಿಲ್ಲ, ಬಿಸಿಲು ಮೂಡಿರುವ ವಾತಾವರಣವಿದ್ದರೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಉಳ್ಳಾಲ ಭಾಗದಿಂದ ಅರಬ್ಬೀಸಮುದ್ರ ಕೊಂಚವೇ ದೂರದಲ್ಲಿದೆ ಮತ್ತು ನದಿಗಳ ನೀರು ಹರಿದು ಸಮುದ್ರ ಸೇರುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಕಾರಣ ನದಿಪಾತ್ರದ ಕೃಷಿ ಭೂಮಿಗಳಿಗೂ ನೀರು ನುಗ್ಗುತ್ತಿದೆ.
ದಕ್ಷಿಣ ಕನ್ನಡ, ಆಗಸ್ಟ್ 30: ತುಂಬಿ ಹರಿಯುತ್ತಿರುವ ನದಿಗಳ ದೃಶ್ಯ ನೋಡಲು ಸುಂದರ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವುದಿಂದ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ ಮತ್ತು ಜಲಾಶಯಗಳು (reservoirs) ಭರ್ತಿಯಾಗಿವೆ. ಮೈದುಂಬಿ ಹರಿಯುತ್ತಿರುವ ನೇತ್ರಾವತಿಯನ್ನು ನೀವಿಲ್ಲಿ ನೋಡುತ್ತಿದ್ದೀರಿ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಸುರಿಯುವುದು ಮುಂದುವರಿದಿರುವುದರಿಂದ ನೇತ್ರಾವತಿ ಸೇರಿದಂತೆ ಜಿಲ್ಲೆಯ ಕುಮಾರಧಾರ, ಫಲ್ಗುಣಿ ಮತ್ತು ನಂದಿನಿ ನದಿಗಳು ತುಂಬಿ ಹರಿಯುತ್ತಿವೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಜಿಲ್ಲಾಡಳಿತ ಇವತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಅಂಗನವಾಡಿ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿದೆ. ನಿನ್ನೆಯೂ ಮಳೆಯ ಕಾರಣ ಶಾಲೆಗಳು ಬಂದ್ ಆಗಿದ್ದವು.
ಇದನ್ನೂ ಓದಿ: ಮಹಾರಾಷ್ಟ್ರ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸತತ ಮಳೆ, ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಳ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

