ಪ್ರತಿಭಟನಾ ಮೆರವಣಿಗೆ ವೇಳೆ ತೇಜಸ್ವಿ ಯಾದವ್, ಆರ್‌ಜೆಡಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

Updated on: Aug 19, 2026 | 5:00 PM

ಲೋಕಭವನ ಚಲೋ ಮೆರವಣಿಗೆಯ ಸಂದರ್ಭದಲ್ಲಿ, ತೇಜಸ್ವಿ ಯಾದವ್ ಮತ್ತು ಇತರ ಪ್ರತಿಭಟನಾಕಾರರನ್ನು ಪೊಲೀಸರು ಕರೆದೊಯ್ಯುತ್ತಿದ್ದ ಬಸ್ಸಿನ ಮೇಲೆ ಕೆಲವು ಪ್ರತಿಭಟನಾಕಾರರು ಹತ್ತಿದರು. ವಶಕ್ಕೆ ಒಳಗಾದ ನಂತರ ಮಾತನಾಡಿದ ತೇಜಸ್ವಿ ಯಾದವ್, ಬಿಹಾರ ಸರ್ಕಾರವು ಯುವಜನತೆಗೆ ಹೆದರುತ್ತಿದೆ ಎಂದು ಹೇಳಿದರು ಹಾಗೂ ಆರ್‌ಜೆಡಿ ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ನಿರುದ್ಯೋಗದ ವಿರುದ್ಧ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಪ್ರತಿಪಾದಿಸಿದರು. ಯಾವ ಸರ್ಕಾರವೂ ಶಾಶ್ವತವಲ್ಲ, ಪ್ರತಿಯೊಂದು ಸರ್ಕಾರವೂ ಒಂದು ದಿನ ತೊಲಗಲೇಬೇಕು ಮತ್ತು ತಮ್ಮ ಪಕ್ಷಕ್ಕೆ ಎಲ್ಲರ ಬೆಂಬಲವಿದೆ ಎಂದು ಅವರು ಹೇಳಿದರು.

ಪಾಟ್ನಾ, ಆಗಸ್ಟ್ 19: ಬಿಹಾರ ವಿಧಾನಸಭಾ ವಿರೋಧ ಪಕ್ಷದ ನಾಯಕ ಮತ್ತು ರಾಷ್ಟ್ರೀಯ ಜನತಾ ದಳದ (RJD) ನಾಯಕ ತೇಜಸ್ವಿ ಯಾದವ್ (Tejashwi Yadav) ಹಾಗೂ ಆರ್‌ಜೆಡಿ ಸಂಸದೆ ಮಿಶಾ ಭಾರತಿ ಸೇರಿದಂತೆ ಹಲವು ಆರ್​ಜೆಡಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳು, ನಿರುದ್ಯೋಗ, ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಆಗ್ರಹಿಸಿ ಪಾಟ್ನಾದ ಲೋಕಭವನದತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ಲೋಕಭವನ ಚಲೋ ಮೆರವಣಿಗೆಯ ಸಂದರ್ಭದಲ್ಲಿ, ತೇಜಸ್ವಿ ಯಾದವ್ ಮತ್ತು ಇತರ ಪ್ರತಿಭಟನಾಕಾರರನ್ನು ಪೊಲೀಸರು ಕರೆದೊಯ್ಯುತ್ತಿದ್ದ ಬಸ್ಸಿನ ಮೇಲೆ ಕೆಲವು ಪ್ರತಿಭಟನಾಕಾರರು ಹತ್ತಿದರು. ವಶಕ್ಕೆ ಒಳಗಾದ ನಂತರ ಮಾತನಾಡಿದ ತೇಜಸ್ವಿ ಯಾದವ್, ಬಿಹಾರ ಸರ್ಕಾರವು ಯುವಜನತೆಗೆ ಹೆದರುತ್ತಿದೆ ಎಂದು ಹೇಳಿದರು ಹಾಗೂ ಆರ್‌ಜೆಡಿ ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ನಿರುದ್ಯೋಗದ ವಿರುದ್ಧ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಪ್ರತಿಪಾದಿಸಿದರು. ಯಾವ ಸರ್ಕಾರವೂ ಶಾಶ್ವತವಲ್ಲ, ಪ್ರತಿಯೊಂದು ಸರ್ಕಾರವೂ ಒಂದು ದಿನ ತೊಲಗಲೇಬೇಕು ಮತ್ತು ತಮ್ಮ ಪಕ್ಷಕ್ಕೆ ಎಲ್ಲರ ಬೆಂಬಲವಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us