Video: ಬಿಹಾರ: ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ, ಪ್ರತಿಭಟನೆ

Updated on: Jul 09, 2025 | 9:39 AM

ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗ ನೀಡಿರುವ ಸೂಚನೆಯನ್ನು ವಿರೋಧಿಸಿ ಆರ್​ಜೆಡಿ ಹಾಗೂ ಇತರೆ ಮಿತ್ರಪಕ್ಷಗಳು ರಸ್ತೆಗಿಳಿದಿವೆ. ಸೋನ್​​ಪುರ್, ಹಾಜಿಪುರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜಹನಾಬಾದ್ ರೈಲ್ವೆ ನಿಲ್ದಾಣದಲ್ಲಿ ಆರ್​ಜೆಡಿ ರೈಲು ತಡೆದು ಪ್ರತಿಭಟನೆ ನಡೆಸಿತು.

ಪಾಟ್ನಾ, ಜುಲೈ 09: ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗ ನೀಡಿರುವ ಸೂಚನೆಯನ್ನು ವಿರೋಧಿಸಿ ಆರ್​ಜೆಡಿ ಹಾಗೂ ಇತರೆ ಮಿತ್ರಪಕ್ಷಗಳು ರಸ್ತೆಗಿಳಿದಿವೆ. ಭಾರತ್​ ಬಂದ್​ಗೆ ಕರೆ ನೀಡಲಾಗಿದೆ. ಸೋನ್​​ಪುರ್, ಹಾಜಿಪುರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜಹನಾಬಾದ್ ರೈಲ್ವೆ ನಿಲ್ದಾಣದಲ್ಲಿ ಆರ್​ಜೆಡಿ ರೈಲು ತಡೆದು ಪ್ರತಿಭಟನೆ ನಡೆಸಿತು.

ಇನ್ನೂ ಕೆಲವೆಡೆ ರಸ್ತೆಗಳಲ್ಲಿ ಟೈರ್​​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಹೊಸ ಕಾರ್ಮಿಕ ಸಂಹಿತೆಯನ್ನು ಜಾರಿಗೆ ತರುವ ಕೇಂದ್ರ ಚುನಾವಣಾ ಸಂಸ್ಥೆಯ ನಿರ್ಧಾರದ ವಿರುದ್ಧ ಬಿಹಾರದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈಜೋಡಿಸಲಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ