ಬಿಹಾರದ ಉಪಮುಖ್ಯಮಂತ್ರಿ ಕಾರಿನ ಮೇಲೆ ಚಪ್ಪಲಿ ಎಸೆದು, ಕಲ್ಲು ತೂರಾಟ
ಬಿಹಾರದ ಲಖಿಸರೈನಲ್ಲಿ ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕಾರಿನ ಮೇಲೆ ಆರ್‌ಜೆಡಿ ಬೆಂಬಲಿಗರು ಚಪ್ಪಲಿ ಎಸೆದು ಕಲ್ಲು ತೂರಾಟ ನಡೆಸಿದ್ದಾರೆ. ಲಖಿಸರೈನಲ್ಲಿ ಮತದಾನದ ದಿನದಂದು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ಅಪರಿಚಿತ ವ್ಯಕ್ತಿಗಳು ಕಲ್ಲು ಮತ್ತು ಚಪ್ಪಲಿಗಳಿಂದ ದಾಳಿ ಮಾಡಿದ್ದಾರೆ. ಆರ್‌ಜೆಡಿ ಬೆಂಬಲಿಗರು ಅವರ ಭೇಟಿಯನ್ನು ತಡೆದಿದ್ದಾರೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.
ಪಾಟ್ನಾ, ನವೆಂಬರ್ 6: ಬಿಹಾರದಲ್ಲಿ ಇಂದು ಮೊದಲ ಹಂತದ ವಿಧಾನಸಭಾ ಚುನಾವಣೆ (Bihar Assembly Elections) ನಡೆಯುತ್ತಿದೆ. ಈ ವೇಳೆ ಲಖಿಸರೈನಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ಲಖಿಸರೈನ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಸಿನ್ಹಾ ಅವರ ವಾಹನವನ್ನು ಸುತ್ತುವರೆದ ಆರ್‌ಜೆಡಿ ಬೆಂಬಲಿಗರು ಅವರ ಕಾರಿನ ಮೇಲೆ ಚಪ್ಪಲಿ ಎಸೆದು, ಕಲ್ಲು ಮತ್ತು ಸಗಣಿ ಎಸೆದು ಗಲಾಟೆ ಮಾಡಿದ್ದಾರೆ. ಕಾರಿನ ಎದುರು ನಿಂತು “ಮುರ್ದಾಬಾದ್” ಘೋಷಣೆಗಳನ್ನು ಕೂಗಿದ್ದಾರೆ.
ಭೂಮಿಹಾರ್ ನಾಯಕ ಮತ್ತು ಮೂರು ಬಾರಿ ಶಾಸಕರಾಗಿರುವ ವಿಜಯ್ ಕುಮಾರ್ ಸಿನ್ಹಾ ಈ ಬಾರಿಯೂ ತಮ್ಮ ತವರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವುದರಿಂದ ಇಂದು ಅವರು ಮತಗಟ್ಟೆಗಳಿಗೆ ಭೇಟಿ ನೀಡುತ್ತಿದ್ದರು. ಆಗ ಈ ದಾಳಿ ನಡೆದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

