ದೊಡ್ಡಬಳ್ಳಾಪುರದಲ್ಲಿ ಆರ್ ಎಲ್ ಜಾಲಪ್ಪ ಅಂತಿಮ ಯಾತ್ರೆ; ಎಸ್ ಎಂ ಕೃಷ್ಣ ಸೇರಿದಂತೆ ಗಣ್ಯರಿಂದ ಅಂತಿಮ ನಮನ
ಕಾಲೇಜಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆಯಲಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅಂತಿಮ ದರ್ಶನ ಪಡೆಯಲ ದೊಡ್ಡಬಳ್ಳಾಪುರ ನಗರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಆಗಮಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಆರ್ ಎಲ್ ಜಾಲಪ್ಪ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಗಿದೆ. ಈ ವೇಳೆ ಅಗಲಿದ ಜಾಲಪ್ಪಗೆ ಗ್ರಾಮಸ್ಥರು ಅಂತಿನ ನಮನ ಸಲ್ಲಿಸಿದ್ದಾರೆ. ಕುಮಾರ ಬಂಗಾರಪ್ಪ, ಕೆಎನ್ ರಾಜಣ್ಣ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ದರ್ಶನಕ್ಕೆ ಇಟ್ಟು, ಅಂತ್ಯಸಂಸ್ಕಾರ ನಡೆಸಲಾಗುವುದು. ಕಾಲೇಜಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆಯಲಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅಂತಿಮ ದರ್ಶನ ಪಡೆಯಲ ದೊಡ್ಡಬಳ್ಳಾಪುರ ನಗರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಆಗಮಿಸಿದ್ದಾರೆ. ಟಿಬಿ ಸರ್ಕಲ್ನಲ್ಲಿ ಕೆಲ ಸಂಸದ, ಶಾಸಕರು ಅಂತಿಮ ದರ್ಶನ ಪಡೆದರು. ಅಂತಿಮಯಾತ್ರೆ ಹಿನ್ನೆಲೆ ದಾಬಸ್ಪೇಟೆ-ಹೊಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.
ಇದನ್ನೂ ಓದಿ
ಸುದೀಪ್ ಬಗ್ಗೆ ರಣವೀರ್ ಸಿಂಗ್ ಪ್ರೀತಿಯ ಮಾತು; ‘83’ ಚಿತ್ರಕ್ಕೆ ಸ್ಟಾರ್ ನಟರ ಕಾತರ
Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ