ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

Edited By:

Updated on: Dec 20, 2025 | 9:29 PM

ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮದ್ಯ ಸೇವಿಸಿದ ಅಮಲಿನಲ್ಲಿ ಮುಂದೆ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನ ಚಾಲಕ ಸೇರಿ ಕಾರಿನಲ್ಲಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ.

ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮದ್ಯ ಸೇವಿಸಿದ ಅಮಲಿನಲ್ಲಿ ಮುಂದೆ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನ ಚಾಲಕ ಸೇರಿ ಕಾರಿನಲ್ಲಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ