ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಕಲಪಿಪಾಲ್ ಪೊಲೀಸ್ ಠಾಣೆಯ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದರು.
ಶಾಜಾಪುರ: ಮಧ್ಯಪ್ರದೇಶದ ಶಾಜಾಪುರದಲ್ಲಿ ಶಾಲಾ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ಬಸ್ಸಿನಲ್ಲಿ ಸುಮಾರು 20 ಮಕ್ಕಳಿದ್ದರು. ಕಲಾಪಿಪಾಲ್‌ನ ಆಗ್ಖೇಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಶಾಲೆಯ ಬಸ್ ಮಕ್ಕಳೊಂದಿಗೆ ಶಾಲೆಗೆ ಬರುತ್ತಿತ್ತು. ಇದೇ ವೇಳೆ ಆಗ್ಖೇಡಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos