AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಟಚ್​​ ಆಗಿದ್ದಕ್ಕೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ

ಕಾರಿಗೆ ಟಚ್​​ ಆಗಿದ್ದಕ್ಕೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ

ರಾಮು, ಆನೇಕಲ್​
| Edited By: |

Updated on: Feb 22, 2026 | 1:09 PM

Share

ಬೆಂಗಳೂರಿನ ಆನೇಕಲ್‌ನಲ್ಲಿರುವ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ರಸ್ತೆ ರಂಪಾಟ ನಡೆದಿದೆ. ರೋಗಿಯನ್ನು ಕರೆತರಲು ಹೋಗುತ್ತಿದ್ದ ಆ್ಯಂಬುಲೆನ್ಸ್​​ನ ಕಾರು ಚಾಲಕ ಅಡ್ಡಗಟ್ಟಿ, ವಾಹನ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಸುಮಾರು ಹದಿನೈದು ನಿಮಿಷಗಳ ಕಾಲ ಬಾಯಿಗೆ ಬಂದಂತೆ ನಿಂದಿಸಿದ್ದಾನೆ. ಕಾರು ಚಾಲಕನ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆನೇಕಲ್​​, ಫೆಬ್ರವರಿ 22: ಬೆಂಗಳೂರು ಹೊರವಲಯದಲ್ಲಿ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ ನಡೆಸಿರುವ ಘಟನೆ ವರದಿಯಾಗಿದೆ. ಆನೇಕಲ್‌ನ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದ್ದು, ರೋಗಿಯೊಬ್ಬರನ್ನು ಕರೆತರಲು ತೆರಳುತ್ತಿದ್ದ ಆ್ಯಂಬುಲೆನ್ಸ್​​ನ ಕಾರು ಚಾಲಕ ಮತ್ತು ಕೆಲ ವಿದ್ಯಾರ್ಥಿಗಳು ತಡೆದಿದ್ದಾರೆ. ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್  ಸ್ಪರ್ಶಿಸಿದೆ ಎಂಬ ಕಾರಣಕ್ಕೆ  ಗಲಾಟೆ ಶುರುವಾಗಿದೆ. ಸುಮಾರು ಹದಿನೈದು ನಿಮಿಷಗಳ ಕಾಲ ಆ್ಯಂಬುಲೆನ್ಸ್ ತಡೆದು ನಿಲ್ಲಿಸಿದ್ದು, ಆ್ಯಂಬುಲೆನ್ಸ್ ಚಾಲಕನನ್ನು ಅಶ್ಲೀಲ ಪದಗಳಿಂದ ಬಾಯಿಗೆ ಬಂದಂತೆ ನಿಂದಿಸಲಾಗಿದೆ. ರೋಗಿಗಳನ್ನು ಸಾಗಿಸುವ ತುರ್ತು ವಾಹನಕ್ಕೆ ಅಡ್ಡಿಪಡಿಸಿ, ಅದರ ಸಿಬ್ಬಂದಿಗೆ ನಿಂದಿಸಿದ ಕಾರು ಚಾಲಕನ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.