AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ನಯನಾ ರಾಜೀವ್
|

Updated on: Apr 05, 2026 | 1:05 PM

Share

ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ.

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ. ವೈರಲ್ ಆಗಿರುವ ವಿಡಿಯೋವನ್ನು ಲಕ್ನೋ ಪೊಲೀಸರು ಗಮನಿಸಿದ್ದು, ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳು ಆರೋಪಿಯ ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಂತರ ಆ ವಸ್ತುವು ವಾಸ್ತವವಾಗಿ ಬಂದೂಕನ್ನು ಹೋಲುವ ಲೈಟರ್ ಆಗಿತ್ತು ಎಂದು ಸ್ಪಷ್ಟಪಡಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More