ಬೆಂಗಳೂರಿನ ವೈಟ್ ಫೀಲ್ಡ್ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪುಂಡರು ಕಾರನ್ನು ಅಡ್ಡಗಟ್ಟಿ ಚಾಲಕನಿಗೆ ಧಮ್ಕಿ ಹಾಕಿದ ಘಟನೆ ನಡೆದಿದೆ. ಘಟನೆ ಸಂಬಂಧಿತ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಏಪ್ರಿಲ್ 16: ಬೆಂಗಳೂರಿನ ವೈಟ್ ಫೀಲ್ಡ್ನಲ್ಲಿ ರೋಡ್ ರೇಜ್ ಪ್ರಕರಣ ವರದಿಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನನಿಬಿಡ ರಸ್ತೆಯಲ್ಲೇ ಪುಂಡರು ಕಾರಿಗೆ ಅಡ್ಡಬಂದು ಚಾಲಕನಿಗೆ ಧಮ್ಕಿ ಹಾಕಿದ್ದಾರೆ. ಡ್ರೈವರ್ಗೆ ಕಿರುಕುಳ ನೀಡಿ ಕಾರಿಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಹೆಲ್ಮೆಟ್ ಧರಿಸದೆ ಬಂದ ಇಬ್ಬರು ಯುವಕರು ಕೃತ್ಯ ಎಸಗಿರುವುದು ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ಬಗ್ಗೆ ಕಾರು ಚಾಲಕ, ವೈಟ್ ಫೀಲ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.
Latest Videos
