Vedio: ಕಾರು ಸ್ವಲ್ಪ ತಾಗಿದ್ದಕ್ಕೆ, ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಯತ್ನಿಸಿದ ವ್ಯಕ್ತಿ

Updated on: Apr 26, 2026 | 3:21 PM

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಾರೊಂದು ಸ್ವಲ್ಪ ತಾಗಿದ್ದಕ್ಕೆ ವ್ಯಕ್ತಿಯೊಬ್ಬ ತೋರಿದ ಅತಿರೇಕದ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕಾರೊಳಗೆ ಪುಟ್ಟ ಮಕ್ಕಳಿದ್ದಾರೆ ಎಂದು ಪೋಷಕರು ಕೈಮುಗಿದು ಬೇಡಿಕೊಂಡರೂ, ಆ ವ್ಯಕ್ತಿ ಕೋಲು ಹಿಡಿದು ಹಲ್ಲೆಗೆ ಮುಂದಾದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ.

ಇಂದೋರ್, ಏಪ್ರಿಲ್ 26: ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಾರೊಂದು ಸ್ವಲ್ಪ ತಾಗಿದ್ದಕ್ಕೆ ವ್ಯಕ್ತಿಯೊಬ್ಬ ತೋರಿದ ಅತಿರೇಕದ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕಾರೊಳಗೆ ಪುಟ್ಟ ಮಕ್ಕಳಿದ್ದಾರೆ ಎಂದು ಪೋಷಕರು ಕೈಮುಗಿದು ಬೇಡಿಕೊಂಡರೂ, ಆ ವ್ಯಕ್ತಿ ಕೋಲು ಹಿಡಿದು ಹಲ್ಲೆಗೆ ಮುಂದಾದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ.

ಇಂದೋರ್‌ನ ರಸ್ತೆಯಲ್ಲಿ ಎರಡು ವಾಹನಗಳ ನಡುವೆ ಸಣ್ಣ ಮಟ್ಟದ ಡಿಕ್ಕಿ ಸಂಭವಿಸಿತ್ತು. ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಹಾನಿ ಸಂಭವಿಸದಿದ್ದರೂ, ಮತ್ತೊಂದು ವಾಹನದಲ್ಲಿದ್ದ ವ್ಯಕ್ತಿ ವಿಪರೀತ ಕೋಪಗೊಂಡಿದ್ದಾನೆ. ಕೂಡಲೇ ಕೈಯಲ್ಲಿ ಕೋಲು ಹಿಡಿದು ಕುಟುಂಬವಿದ್ದ ಕಾರಿನ ಮುಂದೆ ಬಂದು ಬೆದರಿಕೆ ಹಾಕಿದ್ದಾನೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More