Video: ಸೂಪರ್​ ಮಾರ್ಕೆಟ್​​ ಲೂಟಿ ಮಾಡಲು ಬಂದ ಕಳ್ಳರಿಗೆ ಸಿಬ್ಬಂದಿ ಕಲಿಸಿದ ಪಾಠ ನೋಡಿ

Updated on: May 03, 2026 | 9:01 AM

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ. ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ.

ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.ದರೋಡೆಕೋರರಲ್ಲಿ ಒಬ್ಬನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಉದ್ಯೋಗಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಶಂಕಿತ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಚಿಕಿತ್ಸೆ ಮುಂದುವರೆದಿದೆ. ಶಸ್ತ್ರಸಜ್ಜಿತರಾಗಿ ಬಂದಿದ್ದರೂ, ಪ್ರಾಣದ ಹಂಗು ತೊರೆದು ಮಳಿಗೆಯ ಸಿಬ್ಬಂದಿ ತೋರಿದ ಈ ಸಾಹಸವು ದರೋಡೆಕೋರರ ಯೋಜನೆಯನ್ನು ಸಂಪೂರ್ಣವಾಗಿ ವಿಫಲಗೊಳಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More