AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ಬಿಗ್​​ ಅಪ್ಡೇಟ್​​ ಕೊಟ್ಟ ರಾಬರ್ಟ್ ವಾದ್ರಾ

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ಬಿಗ್​​ ಅಪ್ಡೇಟ್​​ ಕೊಟ್ಟ ರಾಬರ್ಟ್ ವಾದ್ರಾ

Malatesh Jaggin
| Edited By: |

Updated on: Feb 27, 2026 | 6:45 PM

Share

ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಜನರ ಪ್ರಗತಿಗೆ ಶ್ರಮಿಸುತ್ತಿದ್ದು, ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 27: ಕಾಂಗ್ರೆಸ್​​ ವರಿಷ್ಠೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರಿಗೆ ಆಗಮಿಸಿದ್ದು, ನಗರದ ವಿವಿಧ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇಸ್ಕಾನ್ ದೇವಸ್ಥಾನ ಮತ್ತು ಮಸೀದಿಗೆ ಭೇಟಿ ನೀಡಿದ ಅವರು, ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರದಲ್ಲಿಯೂ ಸಮಯ ಕಳೆದಿದ್ದಾರೆ. ಬೆಂಗಳೂರಿನಲ್ಲಿ ತಮಗೆ ದೊರೆತ ಅಪಾರ ಪ್ರೀತಿ ಮತ್ತು ಅಭಿಮಾನವನ್ನು ವಾದ್ರಾ ಶ್ಲಾಘಿಸಿದ್ದು, ಬೆಂಗಳೂರು ತಮಗೆ ಎರಡನೇ ಮನೆಯಂತಿದೆ ಎಂದು ಬಣ್ಣಿಸಿದ್ದಾರೆ. ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಾಗಿಯೂ ಮಾತನಾಡಿರುವ ವಾದ್ರಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರ್ನಾಟಕದ ಜನರ ಪ್ರಗತಿಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ, ಅವರು ಒಟ್ಟಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ವಾದ್ರಾ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us