‘ಟಾಕ್ಸಿಕ್’ ರಿಲೀಸ್ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
Yash Visits Dharmasthala: ತಮ್ಮ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಯ ಹಿನ್ನೆಲೆಯಲ್ಲಿ ನಟ ಯಶ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದು ಯಶ್ ಅವರ ಸುದೀರ್ಘ ಪದ್ಧತಿಯಾಗಿದ್ದು, ಈ ಬಾರಿಯೂ ಅದನ್ನು ಮುಂದುವರಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈ ಶುಭ ಸಂದರ್ಭದಲ್ಲಿ ನಟ ಯಶ್ ಅವರು ತಮಿಳುನಾಡಿನ ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲಿಂದ ನೇರವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಾಣಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಸಂಪ್ರದಾಯ ಮುಂದುವರಿಸಿದ ಯಶ್:
ತಮ್ಮ ಪ್ರತಿಯೊಂದು ಸಿನಿಮಾ ಬಿಡುಗಡೆಯಾಗುವ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುವುದನ್ನು ಯಶ್ ಪದ್ಧತಿಯಾಗಿ ಆಚರಿಸಿಕೊಂಡು ಬಂದಿದ್ದಾರೆ. ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿರುವ ಯಶ್, ‘ಟಾಕ್ಸಿಕ್’ ರಿಲೀಸ್ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವುದು ಅಭಿಮಾನಿಗಳಲ್ಲಿ ವಿಶೇಷ ಕುತೂಹಲ ಮೂಡಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

