‘ಟಾಕ್ಸಿಕ್​’ ಸಿನಿಮಾ ಮುಹೂರ್ತದಲ್ಲಿ ಹೇಗಿತ್ತು ಯಶ್​ ಗತ್ತು? ವಿಡಿಯೋ ನೋಡಿ..

Updated on: Aug 08, 2024 | 7:00 PM

ಸಕಲ ತಯಾರಿಯೊಂದಿಗೆ ‘ಟಾಕ್ಸಿಕ್’ ಸಿನಿಮಾ ಸೆಟ್ಟೇರಿದೆ. ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕಾಗಿ ಬೃಹತ್ ಸೆಟ್​ಗಳ ನಿರ್ಮಾಣ ಮಾಡಲಾಗಿದೆ. ಯಶ್​ ಅವರು ಈ ಸಿನಿಮಾಗಾಗಿ ನಿರ್ದೇಶಕಿ ಗೀತು ಮೋಹನ್​ದಾಸ್​ ಹಾಗೂ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್​ ಪ್ರೊಡಕ್ಷನ್ಸ್​’ ಜೊತೆ ಕೈ ಜೋಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಆ.8) ನಡೆದ ಮುಹೂರ್ತದ ವಿಡಿಯೋ ಇಲ್ಲಿದೆ..

ಬೆಂಗಳೂರಿನಲ್ಲಿ ‘ಟಾಕ್ಸಿಕ್​’ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಆ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಬಹುದಿನಗಳಿಂದ ಕಾದಿದ್ದ ಈ ಸಿನಿಮಾ ಇಂದು (ಆಗಸ್ಟ್​ 8) ಸೆಟ್ಟೇರಿದೆ. ಚಿತ್ರತಂಡದವರು ಕ್ಯಾಮೆರಾ ಮತ್ತು ಕ್ಲ್ಯಾಪ್​ ಬೋರ್ಡ್​ಗೆ ಪೂಜೆ ಸಲ್ಲಿಸಿದ್ದಾರೆ. ಯಶ್​ ಪಾಲಿಗೆ ಇದು ಮಹತ್ವದ ಪ್ರಾಜೆಕ್ಟ್​. ‘ಕೆಜಿಎಫ್​: ಚಾಪ್ಟರ್​ 2’ ಮೂಲಕ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಅವರಿಗೆ ಈಗ ಹೆಚ್ಚು ಚಾಲೆಂಜ್​ ಇದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಮತ್ತು ಕಲಾವಿದರು ‘ಟಾಕ್ಸಿಕ್​’ ಸಿನಿಮಾ ತಂಡದಲ್ಲಿ ಇದ್ದಾರೆ. ಎಲ್ಲರ ವಿವರಗಳು ಒಂದೊಂದಾಗಿಯೇ ಹೊರಬರಲಿವೆ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮುಹೂರ್ತದ ವಿಡಿಯೋವನ್ನು ‘ಕೆವಿಎನ್​ ಪ್ರೊಡಕ್ಷನ್ಸ್​’ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More