‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

Edited By:

Updated on: Aug 20, 2026 | 9:42 PM

‘ಟಾಕ್ಸಿಕ್’ ಸಿನಿಮಾ ವಿದೇಶದಲ್ಲಿ ಕೂಡ ಒಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ (ಆಗಸ್ಟ್ 21) ಈ ಚಿತ್ರದ ಟಿಕೆಟ್ ಬುಕಿಂಗ್ ಆರಂಭ ಆಗುತ್ತಿದೆ. ಕನ್ನಡ ಸಿನಿಪ್ರಿಯರು ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗ ಈ ಸಿನಿಮಾದ ಆಗಮನವನ್ನು ಬೆರಗುಗಣ್ಣಿನಿಂದ ನೋಡುತ್ತಿದೆ.

‘ಟಾಕ್ಸಿಕ್’ ಸಿನಿಮಾ ವಿದೇಶದಲ್ಲಿ ಕೂಡ ಒಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ (ಆಗಸ್ಟ್ 21) ಈ ಚಿತ್ರದ ಟಿಕೆಟ್ ಬುಕಿಂಗ್ ಆರಂಭ ಆಗುತ್ತಿದೆ. ಕನ್ನಡ ಸಿನಿಪ್ರಿಯರು ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗ ಈ ಸಿನಿಮಾದ ಆಗಮನವನ್ನು ಬೆರಗುಗಣ್ಣಿನಿಂದ ನೋಡುತ್ತಿದೆ. ಚಿತ್ರವನ್ನು ಸ್ವಾಗತಿಸಲು ಸಾಕಷ್ಟು ಕಟೌಟ್​ಗಳು ಸಿದ್ಧವಾಗಿವೆ. ನೂರಾರು ಚಿತ್ರಮಂದಿರಗಳ ಎದುರು ಕಟೌಟ್ ರಾರಾಜಿಸಲಿವೆ. ಹೊರ ರಾಜ್ಯಗಳಲ್ಲಿ ಕೂಡ ದೊಡ್ಡ ಕ್ರೇಜ್ ಶುರು ಆಗಿದೆ. ಆಗಸ್ಟ್ 26ರಂದು ಅದ್ದೂರಿಯಾಗಿ ಈ ಸಿನಿಮಾ ತೆರೆಕಾಣಲಿದೆ. ಅಂದಾಜು 10 ಸಾವಿರ ಪರದೆಗಳಲ್ಲಿ ‘ಟಾಕ್ಸಿಕ್’ (Toxic) ಸಿನಿಮಾ ಪ್ರದರ್ಶನ ಕಾಣಲಿದೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಸಿನಿಮಾಗೆ ಜನರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More