ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

Updated on: Oct 01, 2026 | 8:41 PM

ಮೈಸೂರು ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ವಿಶೇಷ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ಮಾಡಿ ಮಾಹಿತಿ ನೀಡಲಾಗಿದೆ. ಈ ವೇಳೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಮಾತನಾಡಿದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಮೈಸೂರು ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ವಿಶೇಷ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ಮಾಡಿ ಮಾಹಿತಿ ನೀಡಲಾಗಿದೆ. ಈ ವೇಳೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಮಾತನಾಡಿದರು. ‘ಮಾನ್ಯ ಮುಖ್ಯಮಂತ್ರಿಗಳು ಆಸಕ್ತಿವಹಿಸಿ ಇಡೀ ಚಿತ್ರರಂಗ ಬರಬೇಕು ಎಂದು ಆಹ್ವಾನ ನೀಡಿದ್ದಾರೆ. ದಸರಾದಲ್ಲಿ ಭಾಗಿ ಆಗಬೇಕು ಎಂದರೆ ಸಾವಿರಾರು ರೂಪಾಯಿ ಟಿಕೆಟ್ ಇದೆ. ಆದರೆ ಚಿತ್ರರಂಗದವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಎರಡು ಸುತ್ತಿನ ಮೀಟಿಂಗ್ ಆಗಿದೆ. ಎಲ್ಲಿ ಕಲಾವಿದರು ಬರಬೇಕು. ನನಗೆ ಗೊತ್ತಿರುವಂತೆ ಇಷ್ಟು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಹ್ವಾನ ಬಂದಿದೆ’ ಎಂದು ರಾಕ್ ಲೈನ್ ವೆಂಕಟೇಶ್ ಅವರು ಹೇಳಿದ್ದಾರೆ. ದಸರಾ ಪ್ರಯುಕ್ತ 2 ದಿನಗಳ ಕಾಲ ಚಿತ್ರೀಕರಣಕ್ಕೆ ಬಿಡುವು ನೀಡಲಾಗುವುದು ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More