‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’ ಎಂಬ ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಪ್ರತಿಕ್ರಿಯೆ

Updated on: Nov 19, 2026 | 12:05 PM

ರಾಕ್​ಲೈನ್ ವೆಂಕಟೇಶ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಕೆಲವು ಆರೋಪಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರು. ‘ಕಲಾವಿದರು ದೂರು ಹೇಳಿಕೊಳ್ಳಲು ಬಂದಾಗ ಕಲಾವಿದರ ಸಂಘದ ಕಟ್ಟಡದಲ್ಲಿ ಯಾರೂ ಇರಲ್ಲ’ ಎಂಬ ಮಾತಿಗೆ ಉತ್ತರಿಸಿದರು.

ನಟ, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಕೆಲವು ಆರೋಪಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರು. ‘ಕಲಾವಿದರು ದೂರು ಹೇಳಿಕೊಳ್ಳಲು ಬಂದಾಗ ಕಲಾವಿದರ ಸಂಘದ ಕಟ್ಟಡದಲ್ಲಿ ಯಾರೂ ಇರಲ್ಲ’ ಎಂಬ ಮಾತಿಗೆ ಅವರು ಉತ್ತರಿಸಿದರು. ‘ಕಲಾವಿದರ ಸಂಘವು ವಾಣಿಜ್ಯ ಮಂಡಳಿ ರೀತಿ ಅಲ್ಲ. ವಾಣಿಜ್ಯ ಮಂಡಳಿಯಲ್ಲಿ ಬಿಸ್ನೆಸ್. ಆದರೆ ಕಲಾವಿದರ ಸಂಘ ಕ್ರಿಯೇಟಿವಿಟಿಗೆ ಸಂಬಂಧಿಸಿದ್ದು. ಎಲ್ಲ ಕಲಾವಿದರು ಅವರವರ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುತ್ತಾರೆ. ಕಲಾವಿದರು ಕಷ್ಟಪಟ್ಟು ಕಲಾವಿದರ ಸಂಘದ ಕಟ್ಟಡವನ್ನು ನಿರ್ವಹಣೆ ಮಾಡುತ್ತಿದ್ದೇವೆ. ವಾಣಿಜ್ಯ ಮಂಡಳಿಯಲ್ಲಿ ಇರುವಷ್ಟು ಸಿಬ್ಬಂದಿಯನ್ನು ನಾವು ಕಲಾವಿದರ ಸಂಘದ ಕಟ್ಟಡದಲ್ಲಿ ಇರಿಸೋಕೆ ಆಗಲ್ಲ. ಇಂಥ ಒಂದು ಕಟ್ಟಡ ಇಡೀ ದೇಶದಲ್ಲಿ ಬೇರೆ ಎಲ್ಲೂ ಇಲ್ಲ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More