ಕಾವೇರಿ ನೀರಿಗಾಗಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಗರಂ

Updated on: Jul 30, 2026 | 6:35 PM

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇದೆಯಾ? ಕಾವೇರಿ ನೀರಿನ ಹೋರಾಟಕ್ಕೆ ಚಿತ್ರರಂಗದ ಎಲ್ಲರೂ ಬರುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ‘ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ’ ನಡೆಸಿದ ಸುದ್ದಿಗೋಷ್ಠಿ ವೇಳೆ ಈ ಪ್ರಶ್ನೆ ಕೇಳಿಬಂದಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಅವರು ಗರಂ ಆದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಕರಾರು ಆರಂಭ ಆಗಿದೆ. ಈ ವರ್ಷ ನಿರೀಕ್ಷೆಯ ಪ್ರಮಾಣದಲ್ಲಿ ಮಳೆ ಬಾರದೇ ಇರುವುದರಿಂದ ಕರ್ನಾಟಕದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಹೀಗಿರುವಾಗ ತಮಿಳುನಾಡಿನ ಜನರ ಕೃಷಿಗಾಗಿ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಕನ್ನಡ ಚಿತ್ರರಂಗ (Kannada Film Industry) ಕೂಡ ಬೆಂಬಲ ನೀಡುತ್ತಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇದೆಯಾ? ಎಲ್ಲರೂ ಈ ಹೋರಾಟಕ್ಕೆ ಬರುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ‘ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ’ ನಡೆಸಿದ ಸುದ್ದಿಗೋಷ್ಠಿ ವೇಳೆ ಈ ಪ್ರಶ್ನೆ ಕೇಳಿಬಂದಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಅವರು ಗರಂ ಆದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More