ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ

Updated on: Dec 24, 2025 | 9:48 PM

Rohit Sharma Century: 7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಗೆ ಮರಳಿದ ರೋಹಿತ್ ಶರ್ಮಾ, ಮುಂಬೈ ಪರ ಸಿಕ್ಕಿಂ ವಿರುದ್ಧ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿ, ಒಟ್ಟು 155 ರನ್ ಬಾರಿಸಿದರು. 9 ಸಿಕ್ಸರ್, 18 ಬೌಂಡರಿಗಳಿದ್ದ ಈ ಹೊಡಿಬಡಿ ಇನ್ನಿಂಗ್ಸ್‌ನ ವಿಡಿಯೋವನ್ನು ಬಿಸಿಸಿಐ ಹಂಚಿಕೊಂಡಿದ್ದು, ಸದ್ಯ ವೈರಲ್ ಆಗುತ್ತಿದೆ. ರೋಹಿತ್ ಅವರ ಈ ಕಮ್‌ಬ್ಯಾಕ್ ಪ್ರದರ್ಶನ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ.

7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಮೊದಲ ದಿನವೇ ಭರ್ಜರಿ ಶತಕ ಸಿಡಿಸಿದರು. ಈ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ರೋಹಿತ್, ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿದರು. ತಮ್ಮ ಈ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ರೋಹಿತ್ 9 ಸಿಕ್ಸರ್ ಮತ್ತು 18 ಬೌಂಡರಿಗಳ ಸಹಾಯದಿಂದ ಬರೋಬ್ಬರಿ 155 ರನ್ ಸಿಡಿಸಿದರು. ಅಂದರೆ ರೋಹಿತ್ ಬರಿ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 126 ರನ್ ಕಲೆಹಾಕಿದರು. ಇದೀಗ ಅದರ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರಿ ವೈರಲ್ ಆಗುತ್ತಿದೆ.