AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಏಕದಿನ ಕ್ರಿಕೆಟ್‌ನಲ್ಲಿ ಗಂಗೂಲಿಗಿಂತ ವೇಗವಾಗಿ ವಿಶೇಷ ಶತಕ ಪೂರೈಸಿದ ರೋಹಿತ್

IND vs AUS: ಏಕದಿನ ಕ್ರಿಕೆಟ್‌ನಲ್ಲಿ ಗಂಗೂಲಿಗಿಂತ ವೇಗವಾಗಿ ವಿಶೇಷ ಶತಕ ಪೂರೈಸಿದ ರೋಹಿತ್

ಪೃಥ್ವಿಶಂಕರ
|

Updated on:Oct 25, 2025 | 2:46 PM

Share

Rohit Sharma Hits 100 ODI Catches: ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 100 ಕ್ಯಾಚ್‌ಗಳನ್ನು ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ 7ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿಶ್ವದ 34ನೇ ಆಟಗಾರರಾಗಿ, ರೋಹಿತ್ ತಮ್ಮ 276ನೇ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿದರು.

ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಬ್ಯಾಟ್ ಹಿಡಿದು ಕ್ರೀಸ್​ಗಿಳಿಯುವ ಮುನ್ನವೇ ವಿಶೇಷ ಶತಕ ಪೂರೈಸಿದ್ದಾರೆ. ವಾಸ್ತವವಾಗಿ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 100 ಕ್ಯಾಚ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಏಳನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಾಗೆಯೇ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 100 ಕ್ಯಾಚ್‌ಗಳನ್ನು ಪಡೆದ ವಿಶ್ವದ 34 ನೇ ಆಟಗಾರರಾಗಿದ್ದಾರೆ. ರೋಹಿತ್ ತಮ್ಮ 276 ನೇ ಏಕದಿನ ಪಂದ್ಯದಲ್ಲಿ ಕ್ಯಾಚ್‌ಗಳ ಶತಕವನ್ನು ಪೂರೈಸಿದರು. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್, ಸ್ಲಿಪ್‌ನಲ್ಲಿ ಮಿಚೆಲ್ ಓವನ್ ಮತ್ತು ನಾಥನ್ ಎಲಿಸ್ ಅವರ ಕ್ಯಾಚ್ ಅನ್ನು ಹಿಡಿಯುವ ಮೂಲಕ ಕ್ಯಾಚ್​ಗಳ ಶತಕ ಪೂರೈಸಿದರು.

ರೋಹಿತ್ ಶರ್ಮಾಗಿಂತ ಮೊದಲು, ಭಾರತದ ಪರ 100 ಅಥವಾ ಅದಕ್ಕಿಂತ ಹೆಚ್ಚು ಕ್ಯಾಚ್‌ಗಳನ್ನು ಪಡೆದ ದಾಖಲೆಯನ್ನು ವಿರಾಟ್ ಕೊಹ್ಲಿ, ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುರೇಶ್ ರೈನಾ ಮತ್ತು ಸೌರವ್ ಗಂಗೂಲಿ ಹೊಂದಿದ್ದಾರೆ. ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ 163 ಕ್ಯಾಚ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಅಜರ್ 156, ತೆಂಡೂಲ್ಕರ್ 140, ದ್ರಾವಿಡ್ 124, ರೈನಾ 102, ಮತ್ತು ಗಂಗೂಲಿ 100 ಕ್ಯಾಚ್‌ಗಳನ್ನು ಪಡೆದಿದ್ದಾರೆ.

ರೋಹಿತ್ ಶರ್ಮಾ ಮತ್ತು ಸೌರವ್ ಗಂಗೂಲಿ ಏಕದಿನ ಪಂದ್ಯಗಳಲ್ಲಿ ತಲಾ 100 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಆದಾಗ್ಯೂ, ರೋಹಿತ್ ಶರ್ಮಾ ಸೌರವ್ ಗಂಗೂಲಿಗಿಂತ ವೇಗವಾಗಿ ಈ ಮೈಲಿಗಲ್ಲು ತಲುಪಿದ್ದಾರೆ. ರೋಹಿತ್ 276 ಪಂದ್ಯಗಳಲ್ಲಿ 100 ಕ್ಯಾಚ್‌ಗಳನ್ನು ಪೂರೈಸಿದರೆ, ಗಂಗೂಲಿ 100 ಕ್ಯಾಚ್‌ಗಳನ್ನು ಪೂರೈಸಲು 311 ಏಕದಿನ ಪಂದ್ಯಗಳನ್ನು ತೆಗೆದುಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 25, 2025 02:45 PM