AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG 3rd T20I: ಬೆಂಗಳೂರಿಗೆ ಬಂದಾಗ ಟೀಮ್ ಇಂಡಿಯಾಕ್ಕೆ ಸಿಕ್ಕ ಸ್ವಾಗತ ಹೇಗಿತ್ತು ಗೊತ್ತೇ?: ವಿಡಿಯೋ

IND vs AFG 3rd T20I: ಬೆಂಗಳೂರಿಗೆ ಬಂದಾಗ ಟೀಮ್ ಇಂಡಿಯಾಕ್ಕೆ ಸಿಕ್ಕ ಸ್ವಾಗತ ಹೇಗಿತ್ತು ಗೊತ್ತೇ?: ವಿಡಿಯೋ

Vinay Bhat
|

Updated on:Jan 16, 2024 | 7:08 AM

India vs Afghanistan Third T20I: ಇಂದೋರ್‌ನಲ್ಲಿ ನಡೆದ ಎರಡನೇ ಟಿ20I ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಾಬಲ್ಯ ಸಾಧಿಸಿದ ನಂತರ ಟೀಮ್ ಇಂಡಿಯಾ ಬೆಂಗಳೂರು ತಲುಪಿತು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಭಾರತೀಯ ಆಟಗಾರರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಜನವರಿ 17 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ-ಅಫ್ಘಾನಿಸ್ತಾನ (India vs Afghanistan) ನಡುವಣ ಮೂರನೇ ಟಿ20I ಪಂದ್ಯದ ಮುಂಚಿತವಾಗಿ ರೋಹಿತ್ ಶರ್ಮಾ ಮತ್ತು ತಂಡ ಸೋಮವಾರ ಸಂಜೆ ಬೆಂಗಳೂರಿಗೆ ತಲುಪಿದರು. ಇಂದೋರ್‌ನಲ್ಲಿ ನಡೆದ ಎರಡನೇ ಟಿ20I ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಾಬಲ್ಯ ಸಾಧಿಸಿದ ನಂತರ ಟೀಮ್ ಇಂಡಿಯಾ ಬೆಂಗಳೂರು ತಲುಪಿತು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಭಾರತೀಯ ಆಟಗಾರರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದರ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಮೊಹಾಲಿ ಮತ್ತು ಇಂದೋರ್‌ನಲ್ಲಿ ಜಯಗಳಿಸಿದ ನಂತರ ಟೀಮ್ ಇಂಡಿಯಾ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಕೊನೆಯ ಪಂದ್ಯವನ್ನು ಕೂಡ ಗೆದ್ದು ಕ್ಲೀನ್​ಸ್ವೀಪ್ ಮಾಡುವತ್ತ ಭಾರತ ಚಿನ್ನನೆಟ್ಟಿದೆ. ಹೀಗಾಗಿ ತೃತೀಯ ಕದನ ರೋಚಕತೆ ಸೃಷ್ಟಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 16, 2024 07:07 AM