ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ (India vs South Africa) ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಸೋಲು ಕಂಡಿತು. ಮೊದಲು ಬ್ಯಾಟಿಂಗ್ ಮಾಡುವ ಆಹ್ವಾನವನ್ನು ಪಡೆದ ಭಾರತ ತಂಡವು ಮೊದಲ ಇನ್ನಿಂಗ್ಸ್ನಲ್ಲಿ 245 ರನ್ ಗಳಿಸಲು ಮಾತ್ರ ಶಕ್ತವಾಯಿತು ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ 131 ರನ್ಗಳಿಗೆ ಎರಡು ಸೆಷನ್ಗಳಿಗಿಂತ ಕಡಿಮೆ ಅವಧಿಯಲ್ಲಿ ಆಲೌಟ್ ಆಯಿತು. ಭಾರತೀಯ ಬ್ಯಾಟ್ಸ್ಮನ್ಗಳ ಕಳಪೆ ಪ್ರದರ್ಶನವನ್ನು ಅಭಿಮಾನಿಗಳು ಮತ್ತು ಆಟದ ತಜ್ಞರು ತೀವ್ರವಾಗಿ ಟೀಕಿಸಿದ್ದಾರೆ. ಎರಡನೇ ಇನ್ನಿಂಗ್ಸ್ ನಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹೊರತು ಪಡಿಸಿ ಉಳಿದ ಬ್ಯಾಟರ್ಗಳು ಯಾರೂ ಯಶಸ್ಸು ಸಾಧಿಸಲಿಲ್ಲ. ಕೊಹ್ಲಿ 82 ಎಸೆತಗಳಲ್ಲಿ 76 ರನ್ ಗಳಿಸಿ ಔಟಾದರು. ಅದ್ಭುತ ಇನ್ನಿಂಗ್ಸ್ ಆಡಿದ ಕೊಹ್ಲಿ ಪೆವಿಲಿಯನ್ಗೆ ಮರಳುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ ಎದ್ದು ನಿಂತು ಶ್ಲಾಘಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ