India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ: ಒಂದು ಅಚ್ಚರಿ ಆಯ್ಕೆ, ಇಬ್ಬರಿಗೆ ವಿಶ್ರಾಂತಿ
India Squad For WI Series: ಬಹುನಿರೀಕ್ಷಿತ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟ ಮಾಡಿದೆ. ಕೆಲವು ಅಚ್ಚರಿಯ ಆಯ್ಕೆಗಳು ನಡೆದರೆ, ಪ್ರಮುಖ ಬೌಲರ್ಗಳಿಗೆ ವಿಶ್ರಾಂತಿ ನೀಡಲಾಗಿದೆ.
ಬಹುನಿರೀಕ್ಷಿತ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ತಂಡವನ್ನು ಪ್ರಕಟ ಮಾಡಿದೆ. ಕೆಲವು ಅಚ್ಚರಿಯ ಆಯ್ಕೆಗಳು ನಡೆದರೆ, ಪ್ರಮುಖ ಬೌಲರ್ಗಳಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನೂ ಕೆಲ ಆಟಗಾರರು ಇಂಜುರಿ ಸಮಸ್ಯೆಯಿಂದ ಸಂಪೂರ್ಣ ಹೊರಬಂದಿಲ್ಲ. ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಕಮ್ಬ್ಯಾಕ್ ಮಾಡಿದ್ದಾರೆ. ಜೊತೆಗೆ ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡ ಏಕದಿನ ಮತ್ತು ಟಿ20 ತಂಡಕ್ಕೆ ಪುನರಾಗಮನ ಕಂಡಿದ್ದರೆ, ಯುವ ಬೌಲರ್‌ಗಳಾದ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ವೇಗಿ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಿರುವ ಹೊಸಮುಖವಾಗಿದ್ದಾರೆ. ಇದರ ನಡುವೆ 26 ವರ್ಷದ ದೀಪಕ್ ಹೂಡಾ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡುರುವುದು ಅಚ್ಚರಿ ಮೂಡಿಸಿದೆ. ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗೆ ಎರಡು ಸರಣಿಯಲ್ಲೂ ವಿಶ್ರಾಂತಿ ನೀಡಲಾಗಿದೆ. ಕೆಎಲ್ ರಾಹುಲ್ (KL Rahul) ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನ ಸೇರಲಿದ್ದಾರೆ.
ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೀ), ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.
ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್.
MS Dhoni ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ ಎಂದ ಟೀಮ್ ಇಂಡಿಯಾ ಮಾಜಿ ಆಟಗಾರ
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್

