ಏನ್ ನಡೀತಿದೆ… ನೀತಾ ಅಂಬಾನಿಯ ಫೋನ್ ಇಣುಕಿ ಇಣುಕಿ ನೋಡಿದ ರೋಹಿತ್ ಶರ್ಮಾ
India Women vs South Africa Women, Final: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್ಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹಾಗೂ ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ನೀತಾ ಅಂಬಾನಿ ಕಾಣಿಸಿಕೊಂಡಿದ್ದರು. ಮುಂಬೈ ಇಂಡಿಯನ್ಸ್ ತಂಡದ ಮಾಲಕಿಯಾಗಿರುವ ನೀತಾ ಅಂಬಾನಿ ಜೊತೆ ಕೂತಿದ್ದ ರೋಹಿತ್ ಶರ್ಮಾ ಪದೇ ಪದೇ ಇಣುಕಿ ಅವರ ಮೊಬೈಲ್ ಫೋನ್ ನೋಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪಂದ್ಯ ವೀಕ್ಷಿಸುತ್ತಾ ನೀತಾ ಅಂಬಾನಿ ಫೋನ್ನಲ್ಲಿ ಅದೇನೋ ಮಾಡುತ್ತಿದ್ದರೆ, ಇತ್ತ ಬದಿ ಕೂತಿದ್ದ ರೋಹಿತ್ ಶರ್ಮಾ ಏನ್ ನಡೀತಿದೆ ಎಂಬ ಭಾವಾರ್ಥದಲ್ಲಿ ಇಣುಕುತ್ತಾ ಅವರ ಫೋನ್ ವೀಕ್ಷಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್ಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

