DC vs MI Record Alert: 51 ಸಿಕ್ಸರ್‌, 1092 ರನ್‌.. ಡೆಲ್ಲಿ ವಿರುದ್ಧ ರೋಹಿತ್ ವಿಶೇಷ ಮೈಲಿಗಲ್ಲು

Updated on: Apr 04, 2026 | 5:42 PM

Rohit Sharma IPL Records: ಐಪಿಎಲ್ 2026 ಪಂದ್ಯದಲ್ಲಿ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 35 ರನ್ ಗಳಿಸಿ ಮಿಂಚಿದರು. ಈ ಇನ್ನಿಂಗ್ಸ್‌ನೊಂದಿಗೆ, ಅವರು ಡೆಲ್ಲಿ ವಿರುದ್ಧ ಅತಿ ಹೆಚ್ಚು ರನ್ (1092) ಗಳಿಸಿದ ಬ್ಯಾಟ್ಸ್‌ಮನ್ ಆದರು. ಅಲ್ಲದೆ, ಒಂದೇ ತಂಡದ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳನ್ನು (51) ಬಾರಿಸಿದವರಲ್ಲಿ ಮೂರನೇ ಸ್ಥಾನಕ್ಕೆ ಏರಿದರು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಪರ ಮಾಜಿ ನಾಯಕ ರೋಹಿತ್ ಶರ್ಮಾ 26 ಎಸೆತಗಳಲ್ಲಿ 35 ರನ್‌ಗಳ ಸಣ್ಣ ಆದರೆ ಪ್ರಮುಖ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸ್ ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರೋಹಿತ್ ಡೆಲ್ಲಿ ತಂಡದ ವಿರುದ್ಧ ವಿಶೇಷ ಮೈಲಿಗಲ್ಲನ್ನು ದಾಟಿದರು.

ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಇದೀಗ ಮೂರನೇ ಸ್ಥಾನಕ್ಕೇರಿದ್ದಾರೆ. ಇಲ್ಲಿಯವರೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಹಿತ್ 51 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ, ದೆಹಲಿ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಇದೀಗ ಅಗ್ರಸ್ಥಾನಕ್ಕೇರಿದ್ದಾರೆ. ರೋಹಿತ್ ಇಲ್ಲಿಯವರೆಗೆ ದೆಹಲಿ ವಿರುದ್ಧ 1092 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us