ನಾಯಕತ್ವದಿಂದ ಕೈಬಿಟ್ಟ ಬೆನ್ನಲ್ಲೇ ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ
Rohit Sharma in Airport: ಮುಂಬರುವ ಎರಡು ಪಂದ್ಯಗಳ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗಾಗಿ ರೋಹಿತ್ ಶರ್ಮಾ ಹರಿಣಗಳ ನಾಡಿಗೆ ಪ್ರಯಾಣ ಬೆಳೆಸಲು ವಿಮಾನ ನಿಲ್ದಾಣಕ್ಕೆ ಬಂದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಶುಕ್ರವಾರ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯ ಅವರನ್ನು ಹೊಸ ನಾಯಕನಾಗಿ ಘೋಷಿಸಿದ ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಮುಂಬರುವ ಎರಡು ಪಂದ್ಯಗಳ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗಾಗಿ ರೋಹಿತ್ ಹರಿಣಗಳ ನಾಡಿಗೆ ಪ್ರಯಾಣ ಬೆಳೆಸಲು ವಿಮಾನ ನಿಲ್ದಾಣಕ್ಕೆ ಬಂದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದಕ್ಕೂ ಮುನ್ನ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಸರಣಿಯ ತಯಾರಿಯನ್ನು ಪ್ರಾರಂಭಿಸಲು ಆಫ್ರಿಕಾ ರಾಷ್ಟ್ರಕ್ಕೆ ತೆರಳಿದ್ದರು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಪ್ರೋಟೀಸ್ ವಿರುದ್ಧ ಟೀಮ್ ಇಂಡಿಯಾದ ಸೀಮಿತ ಓವರ್‌ಗಳ ಸರಣಿಯ ಭಾಗವಾಗಿಲ್ಲ. ಸೆಂಚುರಿಯನ್‌ನಲ್ಲಿ ಬಾಕ್ಸಿಂಗ್ ದಿನದಂದು ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆರಂಭಿಸಲಿದ್ದು, ಇದರಲ್ಲಿ ಮಾತ್ರ ಕೊಹ್ಲಿ-ರೋಹಿತ್ ಕಾಣಿಸಿಕೊಳ್ಳಲಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos