AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಏಕದಿನ ಕ್ರಿಕೆಟ್​ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ; ಅಫ್ರಿದಿ ದಾಖಲೆ ಧೂಳಿಪಟ

IND vs SA: ಏಕದಿನ ಕ್ರಿಕೆಟ್​ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ; ಅಫ್ರಿದಿ ದಾಖಲೆ ಧೂಳಿಪಟ

ಪೃಥ್ವಿಶಂಕರ
|

Updated on: Nov 30, 2025 | 4:11 PM

Share

Rohit Sharma Sets New World Record: ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅರ್ಧಶತಕ ಬಾರಿಸುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಅವರು ಪಾಕಿಸ್ತಾನದ ಶಾಹಿದ್ ಅಫ್ರಿದಿ ಅವರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಮುರಿದು ಹೊಸ ವಿಶ್ವದಾಖಲೆ ಬರೆದಿದ್ದಾರೆ. ಅಫ್ರಿದಿಗಿಂತ 100 ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿರುವುದು ವಿಶೇಷ. ರೋಹಿತ್ ಈಗ ODI ಸಿಕ್ಸರ್‌ಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ರಾಂಚಿಯಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ರಾಂಚಿ ಏಕದಿನ ಪಂದ್ಯಕ್ಕೂ ಮುನ್ನ, ರೋಹಿತ್ ಶರ್ಮಾ 268 ಇನ್ನಿಂಗ್ಸ್‌ಗಳಲ್ಲಿ 349 ಸಿಕ್ಸರ್‌ಗಳನ್ನು ಬಾರಿಸಿದ್ದರು. ಹೀಗಾಗಿ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಮುರಿಯಲು ರೋಹಿತ್​ಗೆ ಕೇವಲ ಮೂರು ಸಿಕ್ಸರ್‌ಗಳು ಬೇಕಾಗಿದ್ದವು. ಈ ಪಂದ್ಯದ 20 ನೇ ಓವರ್‌ನಲ್ಲಿ ತಮ್ಮ ಮೂರನೇ ಸಿಕ್ಸರ್ ಬಾರಿಸಿದ ರೋಹಿತ್, ಅಫ್ರಿದಿ ಅವರ ದಾಖಲೆಯನ್ನು ಮುರಿದರು.

ರೋಹಿತ್ ಕೇವಲ 269 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವದಾಖಲೆ ನಿರ್ಮಿಸಿದರು. ಗಮನಾರ್ಹವಾಗಿ, ರೋಹಿತ್, ಅಫ್ರಿದಿಗಿಂತ 100 ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ರಿದಿ 369 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಉಳಿದಂತೆ ಕ್ರಿಸ್ ಗೇಲ್ 331 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ