ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Updated on: Jun 23, 2026 | 10:46 PM

ಭಾರತದ ಕ್ರಿಕೆಟ್ ದಿಗ್ಗಜ ರೋಹಿತ್ ಶರ್ಮಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಭಾರತೀಯ ಕ್ರಿಕೆಟ್‌ಗೆ ಅವರ ಅಪ್ರತಿಮ ಕೊಡುಗೆ, ವಿಶೇಷವಾಗಿ 2024ರ ಟಿ20 ವಿಶ್ವಕಪ್ ಮತ್ತು 2025ರ ಚಾಂಪಿಯನ್ಸ್ ಟ್ರೋಫಿ ವಿಜಯಗಳ ನಾಯಕತ್ವಕ್ಕಾಗಿ ಈ ಗೌರವ ನೀಡಲಾಗಿದೆ. ಇದು ಭಾರತೀಯ ಕ್ರೀಡಾಲೋಕಕ್ಕೆ ಹೆಮ್ಮೆಯ ಕ್ಷಣ.

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ಬ್ಯಾಟರ್ ರೋಹಿತ್ ಶರ್ಮಾ ಅವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ‘ಪದ್ಮಶ್ರೀ’ (Padma Shri) ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ನಡೆದ ಭವ್ಯ ನಾಗರಿಕ ಗೌರವ ಪ್ರದಾನ ಸಮಾರಂಭದಲ್ಲಿ (Civil Investiture Ceremony) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಿತ್ ಶರ್ಮಾಗೆ ಪ್ರಶಸ್ತಿ ನೀಡಿ ಗೌರವಿಸಿದರು. ಇದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ. ಕಳೆದ ಕೆಲವು ದಶಕಗಳಿಂದ ಭಾರತೀಯ ಕ್ರಿಕೆಟ್‌ಗೆ ರೋಹಿತ್ ನೀಡಿರುವ ಅಪ್ರತಿಮ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಪ್ರಕಟಿಸಿತ್ತು. ಅವರ ಅದ್ಭುತ ನಾಯಕತ್ವದಲ್ಲಿ ಭಾರತ ತಂಡವು 2024ರಲ್ಲಿ ಬಾರ್ಬಡೋಸ್‌ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಮತ್ತು 2025ರಲ್ಲಿ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಎರಡರಲ್ಲೂ ಐತಿಹಾಸಿಕ ವಿಜಯ ಸಾಧಿಸಿ ಜಗತ್ತಿನಾದ್ಯಂತ ಭಾರತದ ಧ್ವಜವನ್ನು ಎತ್ತಿ ಹಿಡಿದಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us