RCB ದಾಂಡಿಗನ ಸಿಡಿಲಬ್ಬರಕ್ಕೆ ಎದುರಾಳಿ ಪಡೆ ತತ್ತರ..!
MLC 2025: ರೊಮಾರಿಯೊ ಶೆಫರ್ಡ್ ಹೀಗೆ ಅಂತಿಮ ಓವರ್ಗಳ ವೇಳೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ಇದೇ ಮೊದಲೇನಲ್ಲ. ಐಪಿಎಲ್ನಲ್ಲಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲೂ ಶೆಫರ್ಡ್ ಆರ್ಭಟ ಮುಂದುವರೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ರೊಮಾರಿಯೊ ಶೆಫರ್ಡ್ (Romario Shepherd) ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲೂ ಬಿರುಸಿನ ಅರ್ಧಶತಕ ಸಿಡಿಸಿದ್ದಾರೆ. ಅಮೆರಿಕದ ಡಲ್ಲಾಸ್ನಲ್ಲಿ ನಡೆಯುತ್ತಿರುವ ಈ ಟೂರ್ನಿಯ 16ನೇ ಪಂದ್ಯದಲ್ಲಿ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ಹಾಗೂ ಸಿಯಾಟಲ್ ಓರ್ಕಾಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಯಾಟಲ್ ಓರ್ಕಾಸ್ ತಂಡದ ನಾಯಕ ಹೆನ್ರಿಕ್ ಕ್ಲಾಸೆನ್ ಬೌಲಿಂಗ್ ಆಯ್ದುಕೊಂಡಿದ್ದರು.
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಸಿಯಾಟಲ್ ಓರ್ಕಾಸ್ ತಂಡವು 132 ರನ್ಗಳಿಗೆ 7 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಆದರೆ ಒಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ರೊಮಾರಿಯೊ ಶೆಫರ್ಡ್ ಕೊನೆಯ ಎರಡು ಓವರ್ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ ಶೆಫರ್ಡ್ 4 ಫೋರ್ ಹಾಗೂ 4 ಭರ್ಜರಿ ಸಿಕ್ಸರ್ಗಳೊಂದಿಗೆ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
150 ರನ್ಗಳಿಗೆ ಸೀಮಿತವಾಗಬೇಕಿದ್ದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡದ ಸ್ಕೋರ್ ಅನ್ನು 20 ಓವರ್ಗಳ ಮುಕ್ತಾಯದ ವೇಳೆಗೆ 178 ಕ್ಕೆ ತಂದು ನಿಲ್ಲಿಸಿದರು. ಈ ಮೂಲಕ ಸಿಯಾಟಲ್ ಓರ್ಕಾಸ್ ತಂಡಕ್ಕೆ ಕಠಿಣ ಗುರಿ ನೀಡಲು ರೊಮಾರಿಯೊ ಶೆಫರ್ಡ್ ಕಾರಣಕರ್ತರಾದರು.
ಇನ್ನು ಈ ಗುರಿಯನ್ನು ಬೆನ್ನತ್ತಿದ ಸಿಯಾಟಲ್ ಓರ್ಕಾಸ್ ತಂಡವು 18.4 ಓವರ್ಗಳಲ್ಲಿ 144 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವು 32 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇತ್ತ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರೊಮಾರಿಯೊ ಶೆಫರ್ಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಂದಹಾಗೆ ರೊಮಾರಿಯೊ ಶೆಫರ್ಡ್ ಹೀಗೆ ಅಂತಿಮ ಓವರ್ಗಳ ವೇಳೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ಇದೇ ಮೊದಲೇನಲ್ಲ. ಐಪಿಎಲ್ನಲ್ಲಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲೂ ಶೆಫರ್ಡ್ ಆರ್ಭಟ ಮುಂದುವರೆದಿದೆ.