AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ರೊಮಾರಿಯೊ ಶೆಫರ್ಡ್​

ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ರೊಮಾರಿಯೊ ಶೆಫರ್ಡ್​

ಝಾಹಿರ್ ಯೂಸುಫ್
|

Updated on: Nov 01, 2025 | 9:55 AM

Share

Bangladesh vs West Indies, 3rd T20I: ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 152 ರನ್​ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 16,5 ಓವರ್​ಗಳಲ್ಲಿ ಗುರಿ ತಲುಪುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ವಿಂಡೀಸ್ ವಿರುದ್ಧ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ 20 ಓವರ್​ಗಳಲ್ಲಿ 151 ರನ್​ಗಳಿಸಿ ಆಲೌಟ್ ಆಗಿದ್ದರು.

ಬಾಂಗ್ಲಾದೇಶ್ ತಂಡವು ಹೀಗೆ ಅಲ್ಪ ಮೊತ್ತ ಗಳಿಸಲು ಮುಖ್ಯ ಕಾರಣ ರೊಮಾರಿಯೊ ಶೆಫರ್ಡ್​. 17ನೇ ಓವರ್​ನ ಕೊನೆಯ ಎಸೆತದಲ್ಲಿ ನೂರುಲ್ ಹಸನ್ (1) ವಿಕೆಟ್ ಕಬಳಿಸಿದ ಶೆರ್ಫಡ್ ಆ ಬಳಿಕ 19ನೇ ಓವರ್​ನ ಮೊದಲ ಎಸೆತದಲ್ಲಿ ತಂಝಿದ್ ಹಸನ್ (89) ವಿಕೆಟ್ ಪಡೆದರು. ಮರು ಎಸೆತದಲ್ಲೇ ಶೊರಿಫುಲ್ ಇಸ್ಲಾಂ (0) ವಿಕೆಟ್ ಉರುಳಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ವೆಸ್ಟ್ ಇಂಡೀಸ್​ನ 2ನೇ ಬೌಲರ್ ಎಂಬ ಹೆಗ್ಗಳಿಕೆಯನ್ನು ರೊಮಾರಿಯೊ ಶೆಫರ್ಡ್​ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ 2022 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ಇದೀಗ ಬಾಂಗ್ಲಾದೇಶ್ ವಿರುದ್ಧ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಉರುಳಿಸಿ ರೊಮಾರಿಯೊ ಶೆಫರ್ಡ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 152 ರನ್​ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 16,5 ಓವರ್​ಗಳಲ್ಲಿ ಗುರಿ ತಲುಪುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ವಿಂಡೀಸ್ ವಿರುದ್ಧ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.