ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ರೊಮಾರಿಯೊ ಶೆಫರ್ಡ್
Bangladesh vs West Indies, 3rd T20I: ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 152 ರನ್ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 16,5 ಓವರ್ಗಳಲ್ಲಿ ಗುರಿ ತಲುಪುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ವಿಂಡೀಸ್ ವಿರುದ್ಧ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಚಟ್ಟೋಗ್ರಾಮ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ 20 ಓವರ್ಗಳಲ್ಲಿ 151 ರನ್ಗಳಿಸಿ ಆಲೌಟ್ ಆಗಿದ್ದರು.
ಬಾಂಗ್ಲಾದೇಶ್ ತಂಡವು ಹೀಗೆ ಅಲ್ಪ ಮೊತ್ತ ಗಳಿಸಲು ಮುಖ್ಯ ಕಾರಣ ರೊಮಾರಿಯೊ ಶೆಫರ್ಡ್. 17ನೇ ಓವರ್ನ ಕೊನೆಯ ಎಸೆತದಲ್ಲಿ ನೂರುಲ್ ಹಸನ್ (1) ವಿಕೆಟ್ ಕಬಳಿಸಿದ ಶೆರ್ಫಡ್ ಆ ಬಳಿಕ 19ನೇ ಓವರ್ನ ಮೊದಲ ಎಸೆತದಲ್ಲಿ ತಂಝಿದ್ ಹಸನ್ (89) ವಿಕೆಟ್ ಪಡೆದರು. ಮರು ಎಸೆತದಲ್ಲೇ ಶೊರಿಫುಲ್ ಇಸ್ಲಾಂ (0) ವಿಕೆಟ್ ಉರುಳಿಸಿದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ವೆಸ್ಟ್ ಇಂಡೀಸ್ನ 2ನೇ ಬೌಲರ್ ಎಂಬ ಹೆಗ್ಗಳಿಕೆಯನ್ನು ರೊಮಾರಿಯೊ ಶೆಫರ್ಡ್ ತಮ್ಮದಾಗಿಸಿಕೊಂಡರು.
ಇದಕ್ಕೂ ಮುನ್ನ 2022 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ಇದೀಗ ಬಾಂಗ್ಲಾದೇಶ್ ವಿರುದ್ಧ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಉರುಳಿಸಿ ರೊಮಾರಿಯೊ ಶೆಫರ್ಡ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 152 ರನ್ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 16,5 ಓವರ್ಗಳಲ್ಲಿ ಗುರಿ ತಲುಪುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ವಿಂಡೀಸ್ ವಿರುದ್ಧ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
