ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡಲು ರೂಪೇಶ್ ಶೆಟ್ಟಿ ಪ್ಲ್ಯಾನ್; ಇಲ್ಲಿದೆ ವಿವರ

Updated on: Jul 04, 2023 | 11:48 AM

ನಿರೂಪಕನಾಗಿ, ಆರ್​ಜೆ ಆಗಿ, ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ತುಳು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಅವರ ನಿರ್ದೇಶನ ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.

ರೂಪೇಶ್ ಶೆಟ್ಟಿ (Roopesh Shetty) ಅವರದ್ದು ಬಹುಮುಖ ಪ್ರತಿಭೆ. ನಿರೂಪಕನಾಗಿ, ಆರ್​ಜೆ ಆಗಿ, ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ತುಳು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ತುಳು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚೆಗೆ ಅವರು ನಟಿಸಿ ನಿರ್ದೇಶಿಸಿದ ‘ಸರ್ಕಸ್’ ಸಿನಿಮಾ (Circus Movie) ರಿಲೀಸ್ ಆಗಿ ಯಶಸ್ಸು ಕಂಡಿದೆ. ಕನ್ನಡದಲ್ಲಿ ಅವರ ನಿರ್ದೇಶನ ಯಾವಾಗ ಎನ್ನುವ ಪ್ರಶ್ನೆ ಮೂಡಿದೆ. ‘ನಾನು ಕನ್ನಡ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದೇನೆ. ಇದಕ್ಕೆ ಬೇರೆಯವರು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದಲ್ಲಿ ನಿರ್ದೇಶನ ಮಾಡಲು ಒಂದು ಸ್ಕ್ರಿಪ್ಟ್​ ರೆಡಿ ಮಾಡಿಕೊಂಡಿದ್ದೇವೆ. ಇದಕ್ಕೆ ಸ್ವಲ್ಪ ಸಮಯ ಬೇಕು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ
ಇದನ್ನೂ ಓದಿ:

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More