Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ದುಂಡುಮೇಜಿನ ಸಭೆ

ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ದುಂಡುಮೇಜಿನ ಸಭೆ

ನಯನಾ ರಾಜೀವ್
|

Updated on:Sep 23, 2024 | 9:54 AM

ಅಮೆರಿಕದ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ದುಂಡುಮೇಜಿನ ಸಭೆ ನಡೆಸಿದ್ದಾರೆ. ಅಲ್ಲಿ ಅವರು ಭಾರತದ ಬೆಳವಣಿಗೆಯ ನಿರೀಕ್ಷೆಗಳಿಗೆ ಒತ್ತು ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಉಪಕ್ರಮಗಳ ಕುರಿತು ಚರ್ಚಿಸಿದರು. ಈ ಕುರಿತು ಮೋದಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದರಲ್ಲಿ ತಂತ್ರಜ್ಞಾನ, ನಾವೀನ್ಯತೆ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸಲಾಗಿದೆ ಎಂದರು.

ಅಮೆರಿಕದ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ದುಂಡುಮೇಜಿನ ಸಭೆ ನಡೆಸಿದ್ದಾರೆ. ಅಲ್ಲಿ ಅವರು ಭಾರತದ ಬೆಳವಣಿಗೆಯ ನಿರೀಕ್ಷೆಗಳ ಬಗ್ಗೆ ಒತ್ತು ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಉಪಕ್ರಮಗಳ ಕುರಿತು ಚರ್ಚಿಸಿದರು. ಈ ಕುರಿತು ಮೋದಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದರಲ್ಲಿ ತಂತ್ರಜ್ಞಾನ, ನಾವೀನ್ಯತೆ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸಲಾಗಿದೆ ಎಂದರು.

ತಮ್ಮ ಮೂರನೇ ಅವಧಿಯಲ್ಲಿ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ಎಲ್ಲ ಪ್ರಯತ್ನಗಳನ್ನು ಮಾಡಲಿದ್ದೇವೆ ಎಂದು ಹೇಳಿದರು. ತಮ್ಮ ಮೂರನೇ ಅವಧಿಯಲ್ಲಿ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ಎಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದು ಪ್ರಧಾನಿ ಒತ್ತಿ ಹೇಳಿದರು.

ದೇಶವನ್ನು ಜೈವಿಕ ತಂತ್ರಜ್ಞಾನದ ಸೂಪರ್ ಪವರ್ ಆಗಿ ಅಭಿವೃದ್ಧಿಪಡಿಸಲು ಭಾರತದ BIO E3 ಮತ್ತು ನೀತಿಯ ಕುರಿತು ಅವರು ಮಾತನಾಡಿದರು.

ಭಾರತವು ತನ್ನ ಮೊದಲ ರಾಷ್ಟ್ರೀಯ ಭದ್ರತಾ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಅಮೆರಿಕ ಸಹಕಾರದೊಂದಿಗೆ ಪಡೆಯುತ್ತದೆ, ಭಾರತವು ತನ್ನ ಮೊದಲ ರಾಷ್ಟ್ರೀಯ ಭದ್ರತಾ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಪಡೆಯುತ್ತದೆ. ಇದು ಎರಡೂ ದೇಶಗಳಲ್ಲಿ ಮಿಲಿಟರಿ ಹಾರ್ಡ್‌ವೇರ್ ಮತ್ತು ದೂರಸಂಪರ್ಕ ಜಾಲಗಳು ಮತ್ತು ಎಲೆಕ್ಟ್ರಾನಿಕ್ಸ್‌ಗಳಲ್ಲಿ ಬಳಸಲು ಚಿಪ್‌ಗಳನ್ನು ಉತ್ಪಾದಿಸುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 23, 2024 09:52 AM