ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್ ಓಪನ್
ಕಳೆದ ವಾರ ಡಿ.ಜೆ.ಹಳ್ಳಿಯಲ್ಲಿ ವೀಲಿಂಗ್ ಮಾಡಿದ್ದ 14 ಜನರನ್ನು ಬೆಂಗಳೂರು ಪೊಲೀಸರು ರೌಡಿಶೀಟರ್‌ಗಳೆಂದು ಘೋಷಿಸಿದ್ದಾರೆ. ಮಾರಕಾಸ್ತ್ರಗಳೊಂದಿಗೆ ವೀಲಿಂಗ್ ಮಾಡುತ್ತಿದ್ದ ಈ ಆರೋಪಿಗಳು ಪೂರ್ವ ವಿಭಾಗದಲ್ಲಿ ದೊಡ್ಡ ಪ್ರಮಾಣದ ಅಶಾಂತಿಯನ್ನು ಸೃಷ್ಟಿಸಿದ್ದರು. ಪೊಲೀಸರ ಈ ಕ್ರಮವು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ವೀಲಿಂಗ್ ಮಾಡುವವರಿಗೆ ಎಚ್ಚರಿಕೆಯಾಗಿದೆ.
ಬೆಂಗಳೂರು, ಫೆಬ್ರವರಿ 25: ಕಳೆದ ವಾರ ಡಿ.ಜೆ.ಹಳ್ಳಿಯಲ್ಲಿ ರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ವೀಲಿಂಗ್ ಮಾಡಿದ್ದ 14 ಜನರ ವಿರುದ್ಧ ಪೊಲೀಸರು ರೌಡಿಶೀಟರ್ ಓಪನ್ ಮಾಡಿದ್ದಾರೆ. ಆರೋಪಿಗಳು ಪೂರ್ವ ವಿಭಾಗದಲ್ಲಿ ದಾಂದಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 14 ಜನರ ವಿರುದ್ಧ ಡಿ.ಜೆ.ಹಳ್ಳಿ ಪೊಲೀಸರು ರೌಡಿಶೀಟರ್ ಓಪನ್ ಮಾಡಿದ್ದಾರೆ. ವೀಲಿಂಗ್ ಮಾಡೋರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ.
ಪುಂಡರ ವೀಲಿಂಗ್
Stunts like this on the roads may stunt your future !!! BEWARE BCP is watching you#police #followrules #saferoads pic.twitter.com/ScmQVEMSKj
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) February 21, 2025