AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದ ರೌಡಿಶೀಟರ್​​ ತಂದಿದ್ದು ನಕಲಿ ಬಂದೂಕು!

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದ ರೌಡಿಶೀಟರ್​​ ತಂದಿದ್ದು ನಕಲಿ ಬಂದೂಕು!

ನವೀನ್ ಕುಮಾರ್ ಟಿ
| Edited By: |

Updated on: Jan 13, 2026 | 3:59 PM

Share

ಬೆಂಗಳೂರಿನ ಹೊಸಕೋಟೆಯಲ್ಲಿ ರೌಡಿಶೀಟರ್ ವಾಹಿದ್ ಖಾನ್ ಎಂಬಾತ ನಕಲಿ ಗನ್ ಬಳಸಿ ಕ್ಯಾಷಿಯರ್‌ಗೆ ಬೆದರಿಸಿ ಉಚಿತ ಮದ್ಯ ಪಡೆಯಲು ಯತ್ನಿಸಿದ್ದಾನೆ. ತನ್ನ ಸಹಚರನೊಂದಿಗೆ ತೆರಳಿದ್ದ ಆರೋಪಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಈತನ ಸಹಚರನ ಬಂಧನವಾಗಿದ್ದು, ಪ್ರಮುಖ ಆರೋಪಿ ವಾಹಿದ್ ಖಾನ್ ಬಂಧನಕ್ಕೆ ನಂದಗುಡಿ ಪೊಲೀಸರು ಬಲೆ ಬೀಸಿದ್ದಾರೆ.

ದೇವನಹಳ್ಳಿ, ಜನವರಿ 13: ಎಣ್ಣೆಗಾಗಿ ಬಂದೂಕು ತೋರಿಸಿ ಕ್ಯಾಷಿಯರ್​ಗೆ ಬೆದರಿಕೆ ಪ್ರಕರಣ ಸಂಬಂಧ ರೌಡಿಶೀಟರ್ ವಾಹಿದ್‌ ಖಾನ್ ತೋರಿಸಿರುವ ಗನ್​​ ಡಮ್ಮಿ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಹೊಸಕೋಟೆ ತಾಲೂಕಿನ ಬಂಡಹಳ್ಳಿಯ ಬಾರ್​ನಲ್ಲಿ ನಡೆದಿದ್ದ ಘಟನೆ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೈಕ್​ನಲ್ಲಿ ಆರೋಪಿ ವಾಹಿದ್‌ ಜೊತೆ ಬಾರ್​ಗೆ ಬಂದಿದ್ದ ಅತೀಕ್​ ಖಾನ್​​ನ ಪೊಲೀಸರು ಬಂಧಿಸಿದ್ದು, ಆರೋಪಿಗಳು ಎರಡು ಪೈಪ್​ಗಳನ್ನು ಬಳಸಿ ನಕಲಿ ಗನ್ ತಯಾರಿಸಿದ್ದರು. ಟಿಂಕರಿಂಗ್ ಹಾಗೂ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಅತಿಕ್‌ ಖಾನ್ 2 ಮೆಟಲ್ ಪೈಪ್, ಮರದ ಸ್ಟಾಕ್, ಕಪ್ಪು ಬೆಲ್ಟ್ ಬಳಸಿ ಡಮ್ಮಿ ಗನ್ ತಯಾರಿ ಮಾಡಿದ್ದ. ನೋಡೋಕೆ ಅದು ಡಬಲ್ ಬ್ಯಾರಲ್ ಗನ್ ರೀತಿ ಇತ್ತು ಎಂಬುದು ಗೊತ್ತಾಗಿದೆ. ಪ್ರಮುಖ ಆರೋಪಿ ರೌಡಿಶೀಟರ್ ವಾಹಿದ್ ಖಾನ್​ಗಾಗಿ ಹುಡುಕಾಟ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More