ದರ್ಶನ್ ಜೊತೆ ಟೀ ಕುಡಿದು ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

Edited By:

Updated on: May 21, 2026 | 10:54 PM

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಜೊತೆ ಚಹಾ ಹೀರುತ್ತ ಧಮ್ ಹೊಡೆದು ಭಾರೀ ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ದರ್ಶನ್ ಜೊತೆ ಕೂತ ಜೈಲಿನಲ್ಲಿ ಮೋಜು ಮಸ್ತಿ ಮಾಡಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಹೀಗಾಗಿ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ಆದ್ರೆ, ದರ್ಶನ್ ಮಾತ್ರ ಇನ್ನೂ ಒಂದು ವರ್ಷ ಜೈಲಿನಲ್ಲೇ ಇರಬೇಕಿದೆ.

ಬೆಳಗಾವಿ, (ಮೇ 21):ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ (Darshan) ಜೊತೆ ಚಹಾ ಹೀರುತ್ತ ಧಮ್ ಹೊಡೆದು ಭಾರೀ ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ (Wilson garden naga) ಜೈಲಿನಿಂದ ಬಿಡುಗಡೆಯಾಗಿದ್ದಾನೆ. ದರ್ಶನ್ ಜೊತೆ ಕೂತ ಜೈಲಿನಲ್ಲಿ ಮೋಜು ಮಸ್ತಿ ಮಾಡಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಹೀಗಾಗಿ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ಆದ್ರೆ, ದರ್ಶನ್ ಮಾತ್ರ ಇನ್ನೂ ಒಂದು ವರ್ಷ ಜೈಲಿನಲ್ಲೇ ಇರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More