ಬೆಂಗಳೂರು: ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Updated on: May 01, 2026 | 11:11 AM

ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಮಚ್ಚು ಹಿಡಿದು ಪುಂಡರ ಗ್ಯಾಂಗ್ ದಾಂಧಲೆ ನಡೆಸಿದ್ದು, ಸಾರ್ವಜನಿಕರನ್ನು ಬೆದರಿಸಿ ಮನೆಯ ಕಿಟಕಿ ಗಾಜುಗಳನ್ನು ಪುಡಿ ಮಾಡಿದೆ. ಏಪ್ರಿಲ್ 25ರಂದು ನಡೆದ ಈ ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮೇ 1: ಕುಡಿದ ನಶೆಯಲ್ಲಿ ಪುಂಡರ ಗ್ಯಾಂಗ್‌ವೊಂದು ಮಚ್ಚು ಲಾಂಗು ಹಿಡಿದು ದಾಂಧಲೆ ನಡೆಸಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರಿಲ್ 25ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪುಂಡರ ಅಟ್ಟಹಾಸಕ್ಕೆ ಸ್ಥಳೀಯರು ಬೆಚ್ಚಿಬೀಳುವಂತಾಗಿದೆ. ಏಪ್ರಿಲ್ 25ರಂದು ಸಂಜೆ ಸುಮಾರು 4:50ರ ಸಮಯದಲ್ಲಿ ಯುವಕನೊಬ್ಬ ಏರಿಯಾದಲ್ಲಿ ಮಚ್ಚು ಹಿಡಿದು ಓಡಾಡಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಪ್ರಶ್ನಿಸಿದ ಅಕ್ಕಪಕ್ಕದ ಮನೆಯವರಿಗೂ ಮಚ್ಚು ತೋರಿಸಿ ಹೆದರಿಸಿದ್ದಾನೆ. ಇದಾದ ಬಳಿಕ ಸಂಜೆ 7 ಗಂಟೆ ಸುಮಾರಿಗೆ ಮತ್ತೆ ಗ್ಯಾಂಗ್​ನೊಂದಿಗೆ ತಂಡೋಪತಂಡವಾಗಿ ಬಂದು ಮನೆಯೊಂದರ ಕಿಟಕಿ ಗಾಜುಗಳನ್ನು ಒಡೆದು ದಾಂಧಲೆ ನಡೆಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಮುಗಿಸಿಬಿಡುವುದಾಗಿ ಬೆದರಿಕೆ ಹಾಕಿರುವ ಈ ಪುಂಡರ ಗಲಾಟೆಯ ದೃಶ್ಯಗಳು ಮನೆಯೊಂದರ ಸಿಸಿಟಿವಿಯಲ್ಲಿ (CCTV) ಸೆರೆಯಾಗಿವೆ. ಪುಂಡರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸರನ್ನು ಆಗ್ರಹಿಸಿದ್ದಾರೆ.

ವಿಡಿಯೋ, ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More